Tuesday, October 21, 2025
Flats for sale
Homeವಿದೇಶನವದೆಹಲಿ : 'ಭಾರತ, ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ' : ಅಮೆಠಿಕಾ...

ನವದೆಹಲಿ : ‘ಭಾರತ, ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ’ : ಅಮೆಠಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್..!

ನವದೆಹಲಿ : ಮಹತ್ವದ ರಾಜತಾಂತ್ರಿಕ ಬೆಳವಣಿಗೆಯೊಂದರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದು, ಭಾರತ ಮತ್ತು ಪಾಕಿಸ್ತಾನದ ನಡುವಿನ ಬಿಕ್ಕಟ್ಟನ್ನು ಬಗೆಹರಿಸಲು ಅಮೆರಿಕ ಮಧ್ಯಸ್ಥಿಕೆ ವಹಿಸಿದೆ. ದೀರ್ಘ ರಾತ್ರಿಯ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದಿದ್ದಾರೆ.ಆದರೆ ಉಗ್ರರ ನೆಲೆಬೀಡು ಪಾಕಿಸ್ತಾನದ ಮಾತನ್ನು ನಂಬಲು ಸಾಧ್ಯವಿಲ್ಲ ಎಂಬುದು ತಿಳಿದ ವಿಚಾರ.

ಭಾರತದ ಜೊತೆ ಉತ್ತಮ ಸಂಬಂಧ ಹೊಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿ ಭಾರತ ತಮ್ಮ ಮೇಲೆ ದಾಳಿ ನಡೆಸುವುದನ್ನು ತಡೆಯಬೇಕೆಂದು ಪಾಕಿಸ್ತಾನದ ಪ್ರಧಾನಿ ಮನವಿ ಮಾಡಿದ್ದರು ಎಂಬ ಸುದ್ದಿಗಳು ಹರಿದಾಡಿದ್ದವು. ಇಂದು ಈ ಬಗ್ಗೆ ಘೋಷಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಭಾರತ, ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ’ ಎಂದು ಹೇಳಿದ್ದಾರೆ. ಆದರೆ ಸಂಘರ್ಷದ ನಂತರ ಯುದ್ಧವನ್ನು ನಿಲ್ಲಿಸಿ ಶಾಂತತೆಯನ್ನು ಪುನಃಸ್ಥಾಪಿಸುವ ಎರಡೂ ದೇಶಗಳ ನಿರ್ಧಾರವನ್ನು ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular