ನವದೆಹಲಿ : ಸಾಮಾಜಿಕ ಮಾಧ್ಯಮದ ದೈತ್ಯ ಫೇಸ್ಬುಕ್ ಭಾರತ ಸೇರಿ ವಿಶ್ವದ್ಯಾಂತ ಸರ್ವರ್ ಡೌನ್ ಆಗಿದ್ದು, ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳನ್ನು ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ ಎಂದು ವರದಿಯಾಗಿದೆ.
ಡಿಜಿಟಲ್ ಮಾಧ್ಯಮಕ್ಕೆ ಹೆಸರುವಾಸಿಯಾದ ಫೇಸ್ ಬುಕ್ ಪ್ರಪಂಚದಾದ್ಯಂತದ ಬಳಕೆದಾರರನ್ನು ಹೊಂದಿದ್ದು ಇದೀಗ ತಮ್ಮ ಫೇಸ್ಬುಕ್ ಪ್ರೊಫೈಲ್ಗಳನ್ನು ಲಾಗ್ ಇನ್ ಮಾಡುವಲ್ಲಿ ಮತ್ತು ಪ್ರವೇಶಿಸುವಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಫೇಸ್ ಬುಕ್ ಖಾತೆ ತನ್ನಷ್ಟಕೆ ಲಾಗ್ ಔಟ್ ಆಗಿದ್ದು ಲಾಗ್ ಇನ್ ಆಗಲು ಪರದಾಡುತ್ತಿರುವುದು ಕಂಡುಬಂದಿದೆ.
ಇನ್ಸ್ಟಾಗ್ರಾಮ್ ಮತ್ತು ವಾಟ್ಸಾಪ್ ಸೇರಿದಂತೆ ಕಂಪನಿಯ ಒಡೆತನದ ಇತರ ಸೇವೆಗಳಲ್ಲಿ ಸಮಸ್ಯೆಗಳನ್ನ ವರದಿ ಮಾಡಿದ್ದಾರೆ.


