ನವದೆಹಲಿ : ಮಾಜಿ ಪ್ರಧಾನಿ ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಇದ್ದರು.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, “ಎಫ್‌ಎಂಆರ್ ಪ್ರಧಾನಿ ಮನಮೋಹನ್ ಸಿಂಗ್ ಜಿ ಅವರ ನಿಧನದ ಬಗ್ಗೆ ತಿಳಿದು ನನಗೆ ತುಂಬಾ ದುಃಖವಾಗಿದೆ…”ಎಂದು ಪೋಸ್ಟ್ ಮಾಡಿದ್ದಾರೆ.
“ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಆಳವಾದ ಸಂತಾಪಗಳು. ನಮ್ಮ ದೇಶಕ್ಕೆ ನಿಮ್ಮ ಸೇವೆಗೆ ಧನ್ಯವಾದಗಳು. ನಿಮ್ಮ ಆರ್ಥಿಕ ಕ್ರಾಂತಿ ಮತ್ತು ಪ್ರಗತಿಪರ ಬದಲಾವಣೆಗಳಿಗಾಗಿ ನೀವು ಯಾವಾಗಲೂ ಸ್ಮರಣೀಯರಾಗಿರುತ್ತೀರಿ, ನೀವು ದೇಶಕ್ಕೆ ತಂದಿದ್ದೀರಿ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.


