ನವದೆಹಲಿ : ರಷ್ಯಾ-ಉಕ್ರೇನ್ ಯುದ್ಧ ಸುಮಾರು ಎರಡೂವರೆ ವರ್ಷಗಳಿಂದ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಈ ವಿಷಯದ ಬಗ್ಗೆ ಹಲವು ಬಾರಿ ತಮ್ಮ ಅಭಿಪ್ರಾಯವನ್ನು ಸ್ಪಷ್ಟಪಡಿಸಿದ್ದಾರೆ ಮತ್ತು ಶಾಂತಿಯುತ ಪರಿಹಾರವನ್ನು ಪ್ರತಿಪಾದಿಸಿದ್ದಾರೆ.
ಇದೀಗ ರಷ್ಯಾ-ಉಕ್ರೇನ್ ಯುದ್ಧದ ಪರಿಹಾರದ ಕುರಿತು ಮಾತುಕತೆಗಾಗಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಮಾಸ್ಕೋಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.
ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಉದ್ವಿಗ್ನತೆಗೆ ಶಾಂತಿಯುತ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಸತತವಾಗಿ ಪ್ರತಿಪಾದಿಸುತ್ತಿದ್ದಾರೆ., ರಷ್ಯಾ-ಉಕ್ರೇನ್ ವಿವಾದವನ್ನು ಪರಿಹರಿಸುವ ಉದ್ದೇಶದಿಂದ ಚರ್ಚೆಗಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಈ ವಾರ ಮಾಸ್ಕೋಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಎರಡು ತಿಂಗಳಲ್ಲಿ ರಷ್ಯಾ ಮತ್ತು ಉಕ್ರೇನ್ ಎರಡಕ್ಕೂ ದೇಶಕ್ಕೂ ಭೇಟಿ ನೀಡಿದ್ದಾರೆ ಆಯಾ ದೇಶದ ನಾಯಕರಾದ ವ್ಲಾಡಿಮಿರ್ ಪುಟಿನ್ ಮತ್ತು ವೊಲೊಡಿಮಿರ್ ಝಿಲಾಸ್ಕಿ ಅವರನ್ನು ಭೇಟಿಯಾಗಿದ್ದಾರೆ.
ಅಜಿತ್ ದೋವಲ್ ಪ್ರಧಾನಿ ಮೋದಿಯವರ ಶಾಂತಿದೂತರಾಗಿ ರಷ್ಯಾಕ್ಕೆ ಹೋಗಲಿದ್ದಾರೆ. ಉಭಯ ದೇಶಗಳ ನಡುವಿನ ಯುದ್ಧವನ್ನು ಕೊನೆಗಾಣಿಸಲು ಪ್ರಯತ್ನಿಸಲಿದ್ದಾರೆ. ಇತ್ತೀಚೆಗಷ್ಟೇ ಉಕ್ರೇನ್‌ಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು ಯುದ್ಧ ನಿಲ್ಲಿಸುವ ಬಗ್ಗೆ ಮಾತನಾಡಿದ್ದಾರೆ. ದೋವಲ್ ಭೇಟಿಯ ಬಗ್ಗೆ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡೂ ದೇಶಗಳಿಗೆ ಭೇಟಿ ನೀಡುವ ಮೂಲಕ ಶಾಂತಿ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿದ್ದಾರೆ.
ಜುಲೈನಲ್ಲಿ ರಷ್ಯಾಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಅಧ್ಯಕ್ಷ ಪ್ಲಾಡಿಮಿರ್ ಪುಟಿನ್ ಅವರಿಗೆ ಇದು ಯುದ್ಧದ ಯುಗವಲ್ಲ ಎಂಬ ಸಂದೇಶವನ್ನು ಪುನರುಚ್ಚರಿಸಿದ್ದಾರೆ .ಇತ್ತೀಚೆಗೆ ಅವರು ಕೀವ್‌ಗೆ ಭೇಟಿ ನೀಡಿದ್ದಾಗ ಅವರು ಶಾಂತಿಗಾಗಿ ಭಾರತದ ಬದ್ಧತೆಯನ್ನು ಸ್ಪಷ್ಟಪಡಿಸಿದ್ದಾರೆ. ಮೋದಿಯವರ ಉಕ್ರೇನ್ ಭೇಟಿಯ ಸಂದರ್ಭದಲ್ಲಿ, ಅಧ್ಯಕ್ಷ ವೊಲೊಡಿಮಿರ್ ಝಲೆನ್ಸಿ ಅವರು ಯುದ್ಧವನ್ನು ನಿಲ್ಲಿಸಲು ಭಾರತದ ಪ್ರಧಾನಿಯಿಂದ ಮಾತ್ರ ಸಾಧ್ಯ ಎನ್ನುವ ಭರವಸೆ ಹೊಂದಿದ್ದಾರೆ ಎಂದು ಹೇಳಿದ್ದಾರೆ. ಮತ್ತೊಂದೆಡೆ, ಇತ್ತೀಚೆಗೆ ರಷ್ಯಾ ಅಧ್ಯಕ್ಷ ಪ್ಲಾಡಿಮಿರ್ ಪುಟಿನ್ ಅವರು ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಉಕ್ರೇನ್ ಯುದ್ಧದ ಮಾತುಕತೆಯ ಮೂಲಕ ಶಾಂತಿ ಸ್ಥಾಪಿಸುವಲ್ಲಿ ಭಾರತವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಒಪ್ಪಿಕೊಂಡಿದ್ದಾರೆ.