ನವದೆಹಲಿ : ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ನೀಡಲಾದ ಆಹಾರದಲ್ಲಿ ಜೀವಂತ ಹುಳುಗಳು ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಯು ಕಠಿಣ ಕ್ರಮ ಕೈಗೊಂಡಿದೆ. ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಐಆರ್‌ಸಿಟಿಸಿಗೆ 10 ಲಕ್ಷ ರೂ. ಹಾಗೂ ಆಹಾರ ಪೂರೈಕೆದಾರ ಸಂಸ್ಥೆಗೆ 50 ಲಕ್ಷ ರೂ ಸೇರಿದಂತೆ ಒಟ್ಟು 60 ಲಕ್ಷ ರೂ. ಭಾರಿ ದಂಡ ವಿಧಿಸಲಾಗಿದೆ.
ಮಾ.15ರಂದು ಪಾಟ್ನಾ-ಟಾಟಾನಗರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ರಿತೇಶ್ ಕುಮಾರ್ ಸಿಂಗ್ ಅವರಿಗೆ ನೀಡಲಾದ ಮೊಸರಿನ ಪ್ಯಾಕ್‌ನಲ್ಲಿ ಜೀವಂತ ಹುಳುಗಳು ಹರಿದಾಡುತ್ತಿರುವುದು ಕಂಡುಬAದಿತ್ತು.


