ನವದೆಹಲಿ : ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಕೇರಳದ ವಯನಾಡ್ನಲ್ಲಿ ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ರಾಜಕೀಯ ಪ್ರವೇಶಿಸಿದ್ದಾರೆ.
ವಯನಾಡ್ ಮತ್ತು ರಾಯ್ಬರೇಲಿ ಎರಡೂ ಕ್ಷೇತ್ರಗಳಿಂದ ಗೆದ್ದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೆರವು ಮಾಡಿದ ಸ್ಥಾನದಲ್ಲಿ ಪ್ರಿಯಾಂಕಾ ರಾಜಕೀಯ ಅದೃಷ್ಟದ ಪರೀಕ್ಷೆಗೆ ನಿಂತಿದ್ದಾರೆ.
ನಾಮಪತ್ರ ಸಲ್ಲಿಸುವ ಮುನ್ನ ಪ್ರಿಯಾಂಕಾ ಗಾಂಧಿ ಅವರು ತಮ್ಮ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ರೋಡ್ ಶೋ ನಡೆಸಿದರು. ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಆಡಳಿತದ ರಾಜ್ಯಗಳಮುಖ್ಯಮಂತ್ರಿಗಳು ಮತ್ತು ಪಕ್ಷದ ಹಿರಿಯ ನಾಯಕರು
ಉಪಸ್ಥಿತರಿದ್ದರು.