Wednesday, September 23, 2026
Homeವಾಣಿಜ್ಯನವದೆಹಲಿ : ಸ್ಪೈಸ್‌ಜೆಟ್‌ಗೆ ಆರ್ಥಿಕ ಸಂಕಷ್ಟ: ದಿವಾಳಿ ಭೀತಿ ? ಕೇಂದ್ರದಿಂದ ನಿಗಾ.

ನವದೆಹಲಿ : ಸ್ಪೈಸ್‌ಜೆಟ್‌ಗೆ ಆರ್ಥಿಕ ಸಂಕಷ್ಟ: ದಿವಾಳಿ ಭೀತಿ ? ಕೇಂದ್ರದಿಂದ ನಿಗಾ.

ನವದೆಹಲಿ : ಪಶ್ಚಿಮ ಏಷ್ಯಾದ ಸಂಘರ್ಷದ ಪರಿಣಾಮದಿಂದ ಸ್ಪೈಸ್‌ಜೆಟ್‌ ವಿಮಾನಯಾನ ಸಂಸ್ಥೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಯ ಆರ್ಥಿಕ ಚಟುವಟಿಕೆಗಳ ಮೇಲೆ ನಾಗರಿಕ ವಿಮಾನಯಾನ ಸಚಿವಾಲಯ ನಿಗಾ ವಹಿಸಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಮಂಗಳವಾರ ತಿಳಿಸಿದ್ದಾರೆ.

ಪ್ರಯಾಣಿಕರಿಗೆ ತೊಂದರೆಯಾಗದಂತೆ ಹಾಗೂ ವಿಮಾನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗದಂತೆ ವಾಯುಯಾನ ನಿಯಂತ್ರಕ ಸಂಸ್ಥೆಯೊಂದಿಗೆ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಸ್ಪೈಸ್‌ಜೆಟ್‌ನ ಹಣಕಾಸು ಪರಿಸ್ಥಿತಿಯನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದೇ ವೇಳೆ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆಯಡಿ ಸ್ಪೈಸ್‌ಜೆಟ್‌ಗೆ ₹150 ಕೋಟಿ ನೆರವು ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ದಿವಾಳಿತನದ ಬಗ್ಗೆ ಸ್ಪಷ್ಟನೆ : ಸ್ಪೈಸ್‌ಜೆಟ್ ಆರ್ಥಿಕ ಸಂಕಷ್ಟದಲ್ಲಿದೆ ಎಂಬ ಕಾರಣಕ್ಕೆ ಸಂಸ್ಥೆ ಈಗಾಗಲೇ ದಿವಾಳಿಯಾಗಿದೆ ಎಂದು ಅರ್ಥವಲ್ಲ. ಸರ್ಕಾರ ಸಂಸ್ಥೆಯ ಹಣಕಾಸು ಪರಿಸ್ಥಿತಿ ಮತ್ತು ಕಾರ್ಯಾಚರಣೆಯ ಮೇಲೆ ನಿಗಾ ಇಟ್ಟಿರುವುದಾಗಿ ಸಚಿವರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular