ನಾಸಿಕ್ : ಮಹಾರಾಷ್ಟ್ರ ದ ನಾಸಿಕ್‌ನಲ್ಲಿರುವ ಟಿಸಿಎಸ್‌ನಲ್ಲಿ ನಡೆದಿದೆ ಎನ್ನಲಾದ ಬಲವಂತದ ಧಾರ್ಮಿಕ ಮತಾಂತರ ಮತ್ತು ಹಿಂದೂ ಮಹಿಳೆಯರಿಗೆ ಲೈಂಗಿಕ ಕಿರುಕುಳ ಘಟನೆ ಬೆನ್ನಲ್ಲೇ, ದೇಶದಲ್ಲಿ ಮೋಸದ ಮತಾಂತರವನ್ನು ತಡೆಗಟ್ಟಲು ಕಠಿಣ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ನಲ್ಲಿ ಹೊಸ ಅರ್ಜಿ ಸಲ್ಲಿಕೆಯಾಗಿದೆ.
ಟಿಸಿಎಸ್ ಕಚೇರಿಯ ಮಹಿಳಾ ಉದ್ಯೋಗಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿರುವ ಈ ಅರ್ಜಿಯಲ್ಲಿ, ಮೋಸದ ಅಥವಾ ಬಲವಂತದ ಮತಾಂತರ ವನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕಟ್ಟುನಿಟ್ಟಾದ ನಿರ್ದೇಶನ ನೀಡುವಂತೆ ಕೋರಲಾಗಿದೆ.


