Thursday, August 6, 2026
Homeಗ್ಯಾಜೆಟ್ / ಟೆಕ್ನಾಸಿಕ್ ; TCS ಕಂಪನಿಯಲ್ಲಿ ಕಾರ್ಪೊರೇಟ್ ಜೀಹಾದ್, HR ನಿಧಾ ಖಾನ್ ಬಂಧನ.

ನಾಸಿಕ್ ; TCS ಕಂಪನಿಯಲ್ಲಿ ಕಾರ್ಪೊರೇಟ್ ಜೀಹಾದ್, HR ನಿಧಾ ಖಾನ್ ಬಂಧನ.

ನಾಸಿಕ್ : ನಾಸಿಕ್‌ನ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ಸಂಸ್ಥೆಯಲ್ಲಿ ಮಹಿಳಾ ಉದ್ಯೋಗಿಗಳಿಗೆ ಕಿರುಕುಳ ನೀಡಿದ ಆರೋಪದ ಪ್ರಕರಣ ಇದೀಗ ಗಂಭೀರ ಹಂತಕ್ಕೆ ತಲುಪಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ HR ಅಧಿಕಾರಿ ನಿಧಾ ಖಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳಾ ಉದ್ಯೋಗಿಗಳನ್ನು ಕಾರ್ಪೋರೇಟ್ ಔಟಿಂಗ್ ಹೆಸರಿನಲ್ಲಿ ಕರೆದುಕೊಂಡು ಹೋಗಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಕೆಲವು ಉದ್ಯೋಗಿಗಳು ಪ್ರೀತಿಯ ನೆಪದಲ್ಲಿ ಮೋಸ ಹಾಗೂ ಒತ್ತಡ ಹೇರಲಾಗಿದೆ ಎಂದು ದೂರಿದ್ದಾರೆ.

ಈ ಪ್ರಕರಣದಲ್ಲಿ ಈಗಾಗಲೇ 6 ಟೀಮ್ ಲೀಡರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಕಿರುಕುಳ ಸೇರಿದಂತೆ ಹಲವು ಆರೋಪಗಳಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಯುತ್ತಿದೆ.

ಉದ್ಯೋಗಿಗಳಿಂದ ಬಂದ ದೂರುಗಳನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ನೇಮಕಾತಿ ಮತ್ತು ಪದೋನ್ನತಿಯಲ್ಲಿ ಅಕ್ರಮ ನಡೆದಿದೆ ಎಂಬ ಅನುಮಾನವೂ ವ್ಯಕ್ತವಾಗಿದೆ.

2022ರಿಂದಲೇ ದೂರುಗಳು ಬಂದಿರುವ ಹಿನ್ನೆಲೆ, ಪೊಲೀಸರು ಹಳೆಯ ದಾಖಲೆಗಳನ್ನೂ ಪರಿಶೀಲಿಸುತ್ತಿದ್ದಾರೆ. ನಾಸಿಕ್ ಹಾಗೂ ಪುಣೆ ಸಂಪರ್ಕಗಳ ಕುರಿತಾಗಿ ತನಿಖೆ ತೀವ್ರಗೊಂಡಿದೆ.

ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular