ಉಳ್ಳಾಲ ; ಉಳ್ಳಾಲ ನಗರ ಸಭೆಯ ಕಾಂಗ್ರೆಸ್ ಕೌನ್ಸಿಲರ್ ರವಿಚಂದ್ರ ಗಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಸದಾ ಪಕ್ಷ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ ಎಂಬ ಆರೋಪದಡಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನ ಅಮಾನತು ಮಾಡಲಾಗಿದೆ.
ಉಳ್ಳಾಲ ನಗರಸಭೆಯ ಕೌನ್ಸಿಲರ್ ರವಿಚಂದ್ರ ಗಟ್ಟಿ ಅವರು ನಿರಂತರ ತನ್ನದೇ ಕಾಂಗ್ರೆಸ್ ಪಕ್ಷದ ವಿರುದ್ಧ ಹೇಳಿಕೆಗಳಲ್ಲದೆ,ಚಟುವಟಿಕೆಗಳನ್ನ ನಡೆಸುತ್ತಿರುವುದರ ವಿರುದ್ಧ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ಅವರು ಶಿಸ್ತು ಕ್ರಮ ಕೈಗೊಂಡಿದ್ದಾರೆ.ರವಿ ಅವರು ಇತ್ತೀಚಿಗೆ ಉಳ್ಳಾಲ ನಗರಸಭಾ ಕಛೇರಿಯೊಳಗಡೆ ಅರೆ ಬೆತ್ತಲಾಗಿ ಹೊರಳಾಡಿ ಆಡಳಿತ ಕಾಂಗ್ರೆಸ್ ಪಕ್ಷದ ವಿರುದ್ಧವೇ ಪ್ರತಿಭಟನೆ ನಡೆಸಿದ್ದು ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.ಸ್ವಪಕ್ಷೀಯ ಕೌನ್ಸಿಲರೇ ನಗರಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದು ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕೊಳಪಡಿಸಿತ್ತು.
ಇತ್ತೀಚೆಗೆ ನಡೆದ ಉಳ್ಳಾಲ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಸಂದರ್ಭವೂ ರವಿ ಅವರು ಸಭೆಗೆ ಗೈರಾಗಿ ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡಿದ ಕಾರಣದಿಂದ ಅಮಾನತು ಮಾಡಲಾಗಿದ್ದು ಮುಂದಿನ ಆದೇಶದ ತನಕ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
