ಪಣಜಿ : ಉತ್ತರ ಗೋವಾದ ಅರ್ಪೋರಾ ಗ್ರಾಮದಲ್ಲಿ ಶನಿವಾರ ರಾತ್ರಿ ಭೀಕರ ಘಟನೆ ನಡೆದಿದ್ದು, ಬೆಂಕಿ ಅವಘಡದಲ್ಲಿ ಕನಿಷ್ಠ 25 ನೈಟ್‌ಕ್ಲಬ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.
ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದ್ದು, ಗಮನಾರ್ಹ ಸಾವುನೋವುಗಳು ಸಂಭವಿಸಿವೆ ಎಂದು ಗೋವಾ ಪೊಲೀಸ್ ಮುಖ್ಯಸ್ಥ ಅಲೋಕ್ ಕುಮಾರ್ ವರದಿ ಮಾಡಿದ್ದಾರೆ.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಸ್ಥಳೀಯ ಶಾಸಕ ಮೈಕೆಲ್ ಲೋಬೊ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ. ಈ ದುರಂತದಿಂದ ಯಾವುದೇ ಪ್ರವಾಸಿಗರಿಗೆ ತೊಂದರೆಯಾಗಿಲ್ಲ ಎಂದು ಲೋಬೊ ಭರವಸೆ ತಿಳಿಸಿದ್ದಾರೆ.


