ಪಾಟ್ನಾ: ಬಿಹಾರದಲ್ಲಿ ವೇಗವಾಗಿ ಬಂದ ಟ್ರಕ್ಗೆ ಆಟೋರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದಾಗ ಆಟೋರಿಕ್ಷಾದಲ್ಲಿ ಸುಮಾರು 14 ಜನರಿದ್ದರು ಎಂದು ತಿಳಿದುಬಂದಿದೆ.
9 ಮಂದಿ ಸ್ಥಳದಲ್ಲೇ ಮೃತಪಟ್ಟರೆ, 5 ಮಂದಿಯನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜುಲ್ನಾ ಗ್ರಾಮದ ಬಳಿ ಆಟೋ ಲಖಿಸಾರೈ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದ್ದು, ಅವರನ್ನು ಪಾಟ್ನಾದ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


