ಪಾಟ್ನಾ : ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾ ಭಾರತಿ ಗುರುವಾರ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ ಮತ್ತು ವಿರೋಧ ಪಕ್ಷದ ನೇತೃತ್ವದ ಐಎನ್‌ಡಿಐಎ ಬಣ ಅಧಿಕಾರಕ್ಕೆ ಬಂದರೆ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರನ್ನು ಜೈಲಿಗಟ್ಟುತ್ತೇವೆಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮೊದಲು ದೇಶವನ್ನು ಲೂಟಿದ ಭ್ರಷ್ಟರನ್ನು ಜೈಲಿಗಟ್ಟುತ್ತೇನೆಂದು ಶಪಥ ಮಾಡಿದ್ದರು,ಅದರಂತೆಯೇ ಭ್ರಷ್ಟಾಚಾರಿಗಳನ್ನು ಜೈಲಿಗಟ್ಟುವಲ್ಲಿ ಯಶಸ್ವಿಯಾದರು.ಇದೀಗ ಲಾಲು ಪ್ರಸಾದ್ ಯಾದವ್ ಪುತ್ರಿ, ಪಾಟಲೀಪುರ ಕ್ಷೇತ್ರದ ಆರ್‌ಜೆಡಿ ಪಕ್ಷದ ಅಭ್ಯರ್ಥಿ ಮಿಸಾ ಭಾರ್ತಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಒಕ್ಕೂಟಕ್ಕೆ ಜನರು ಅಧಿಕಾರ ನೀಡಿದರೆ ನರೇಂದ್ರ ಮೋದಿಯನ್ನು ಜೈಲಿಗಟ್ಟುತ್ತೇವೆ ಎಂದಿದ್ದಾರೆ. ದ್ವೇಷಪೂರಿತ ಭಾಷಣಗಳು ಭಾರಿ ಕೋಲಾಹಲ ಸೃಷ್ಟಿಸಿದ್ದು ಈ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ.
ಲೋಕಸಭೆ ಚುನಾವಣೆಯ ರಣಕಹಳೆ ನಡೆಯುತ್ತಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಮತದಾನ ನಡೆಯಲಿದೆ. ಲೋಕಸಭಾ ಚುನಾವಣೆ ಗೆಲ್ಲಲು ಇಂಡಿಯಾ ಒಕ್ಕೂಟ ಹಾಗೂ ಅದರ ಪಕ್ಷದ ನಾಯಕರು ಅತ್ಯಂತ ಕೀಳು ಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ. ಅಧಿಕಾರಕ್ಕೆ ಬಂದರೆ ಭ್ರಷ್ಟರನ್ನು ಜೈಲಿಗೆ ಕಳುಹಿಸುತ್ತೇವೆ, ಉಗ್ರರನ್ನು ಹೆಡೆಮುರಿ ಕಟ್ಟುತ್ತೇವೆ ಅನ್ನೋ ಹೇಳಿಕೆ ನೀಡಿದ್ದರೆ ನಾವು ಕೂಡ ಮೆಚ್ಚುಗೆ ವ್ಯಕ್ತಪಡಿಸಬುಹುದು. ಆದರೆ ಮೋದಿಯನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಮಿಸ್ಸಾ ಭಾರ್ತಿ ಹೇಳುತ್ತಿದ್ದಾರೆ. ಇವರೆಲ್ಲರಿಗೂ ಇದೀಗ ಮೋದಿಯನ್ನು ಜೈಲಿಗೆ ಕಳುಹಿಸಬೇಕು, ಅಧಿಕಾರ ಹಿಡಿಯಬೇಕು ಅಷ್ಟೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವಡೆ ಹೇಳಿದ್ದಾರೆ.
ಭ್ರಷ್ಟಾಚಾರ ಆರೋಪದಲ್ಲಿ ಜೈಲು ಸೇರಿದ ನಾಯಕರೇ ಇದೀಗ ಇಂಡಿಯಾ ಒಕ್ಕೂಟದಲ್ಲಿ ಅಧಿಕಾರಕ್ಕೆ ಮರಳಲು ಯತ್ನಿಸುತ್ತಿದ್ದಾರೆ. ಇದೀಗ ಈ ಹೇಳಿಕೆ ಇಂಡಿಯಾ ಕೂಟ ಒಕ್ಕೂಟದಲ್ಲಿ ಬಾರಿ ಮುಖಭಂಗ ಉಂಟುಮಾಡಿದೆ ಎಂದು ವರದಿಯಾಗಿದೆ.