ಪಾಟ್ನಾ: ಕೆಲವು ರಾಜ್ಯಗಳು ಕಡಿಮೆ ಬೆಲೆಗೆ ವಿದ್ಯುತ್ ಖರೀದಿ ಮಾಡಿದರೆ, ಇನ್ನು ಕೆಲವು ರಾಜ್ಯಗಳು ಹೆಚ್ಚಿನ ಬೆಲೆಗೆ ವಿದ್ಯುತ್ ಖರೀದಿ ಮಾಡುತ್ತಿವೆ. ಹೀಗಾಗಿ ಕೇಂದ್ರ ಸರ್ಕಾರ ಒಂದು ದೇಶ, ಒಂದು ವಿದ್ಯುತ್ ದರ ನೀತಿಯನ್ನು ಜಾರಿಗೆ ತರಬೇಕು ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
ಹಲವು ರಾಜ್ಯಗಳು ಇತರರಿಗಿಂತ ಹೆಚ್ಚಿನ ದರದಲ್ಲಿ ವಿದ್ಯುತ್ ಖರೀದಿಸಬೇಕಾದ ಪರಿಸ್ಥಿತಿ ಇದೆ ಎಂದಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ‘ಒಂದು ದೇಶ, ಒಂದು ವಿದ್ಯುತ್ ದರ’ ನೀತಿ ಜಾರಿಗೆ ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬಿಹಾರದಲ್ಲಿ 15,871 ಕೋಟಿ ಮೌಲ್ಯದ ವಿದ್ಯುತ್ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ನಿತೀಶ್ ಕುಮಾರ್, ಇತರ ರಾಜ್ಯಗಳಿಗೆ ಹೋಲಿಸಿದರೆ ಬಿಹಾರ, ಕೇಂದ್ರ ಸರ್ಕಾರದ ವಿದ್ಯುತ್ ಸ್ಥಾವರಗಳಿಂದ ಹೆಚ್ಚಿನ ದರದಲ್ಲಿ ವಿದ್ಯುತ್ ಖರೀದಿಸುತ್ತಿದೆ ಎಂದರು.