ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಗಾಡಿಯನ್ನು ತಡೆದ ಪೊಲೀಸರ ಜೀಪಿಗೆ ಡಿಕ್ಕಿ ಪಡಿಸಿ ಕೊಲೆಯತ್ನ ಮಾಡಿದ ಆರೋಪಿಯ ಪೊಲೀಸರು ಆತ್ಮ ರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹೊಡೆದ ಘಟನೆ ನಡೆದಿದೆ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರ ಮಂಗಳ ಎಂಬಲ್ಲಿ ಇಂದು ಮುಂಜಾನೆ ಆರೋಪಿ ಅಬ್ದುಲ್ಲಾ (40 ವರ್ಷ), ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದನು ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸ್ರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು, ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು. ಆ ಸಮಯದಲ್ಲಿ ಪಿಎಸ್ಐ ರವರು ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ ಒಂದನ್ನು ಐಚರ್ ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿರುತ್ತದೆ. ಘಟನೆಯ ಸಮಯದಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿ ಯಾಗಿದ್ದಾನೆ. ಆರೋಪಿ ಅಬ್ದುಲ್ಲ ಮೂಲತ ಕೇರಳದ ಕಾಸರಗೋಡಿನವನಾಗಿದ್ದು ಆರೋಪಿಯನ್ನು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 33/2025 ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.


