Thursday, July 16, 2026
Homeಕ್ರೈಂಪುತ್ತೂರು : ಅಡಿಂಜೆಯಲ್ಲಿ ನಕಲಿ ನೋಟು ತಯಾರಿಕಾ ಜಾಲ ಭೇದ – 7 ಆರೋಪಿಗಳ ಬಂಧನ.

ಪುತ್ತೂರು : ಅಡಿಂಜೆಯಲ್ಲಿ ನಕಲಿ ನೋಟು ತಯಾರಿಕಾ ಜಾಲ ಭೇದ – 7 ಆರೋಪಿಗಳ ಬಂಧನ.

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಡಿಂಜೆ ಗ್ರಾಮದಲ್ಲಿ ಕಾರ್ಯಾಚರಿಸುತ್ತಿದ್ದ ಬೃಹತ್ ನಕಲಿ ನೋಟು ತಯಾರಿಕಾ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿದ್ದಾರೆ.

ಖಚಿತ ಮಾಹಿತಿಯ ಆಧಾರದ ಮೇಲೆ ನಿರ್ಜನ ಪ್ರದೇಶದಲ್ಲಿದ್ದ ಬಾಡಿಗೆ ಮನೆಯ ಮೇಲೆ ದಾಳಿ ನಡೆಸಿದ ಪೊಲೀಸರು, ನಕಲಿ ನೋಟು ಮುದ್ರಿಸಲು ಬಳಸುತ್ತಿದ್ದ ಮುದ್ರಣ ಯಂತ್ರ, ಗುಣಮಟ್ಟದ ಕಾಗದದ ಬಂಡಲ್‌ಗಳು ಹಾಗೂ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ಏಳು ಮಂದಿಯನ್ನು ಬಂಧಿಸಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಬಾಡಿಗೆ ಮನೆಯಲ್ಲಿ ನಕಲಿ ನೋಟು ತಯಾರಿಕೆ ನಡೆಯುತ್ತಿದ್ದು, ಜಾಲ ಪತ್ತೆಯಾಗದೇ ಇದ್ದರೆ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ನೋಟುಗಳು ಮಾರುಕಟ್ಟೆಗೆ ಸೇರುವ ಸಾಧ್ಯತೆ ಇತ್ತು ಎಂದು ಪೊಲೀಸರು ಶಂಕಿಸಿದ್ದಾರೆ.

ಪ್ರಕರಣದ ಹಿಂದೆ ಇನ್ನೂ ದೊಡ್ಡ ಜಾಲ ಕಾರ್ಯನಿರ್ವಹಿಸುತ್ತಿದೆಯೇ ಎಂಬ ಕುರಿತು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಬಂಧಿತರಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ಪ್ರಕರಣದ ಎಲ್ಲ ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular