ಪುತ್ತೂರು : ಐರ್ಲೆಂಡ್ನಲ್ಲಿ ಕಡಬದ ಯುವಕ ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ದ.ಕ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ವಿಮಲಗಿರಿ ನಿವಾಸಿ ಸಾಂಜೋ ಸುನಿಲ್ ಎಂದು ತಿಳಿದುಬಂದಿದೆ.
ಡಬ್ಲಿನ್ ನಗರದ ಫಿಂಗ್ಲಾಸ್ನ ಚಾರ್ಲ್ಸ್ಟೌನ್ ಪ್ರದೇಶದ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಕಡಬದ ಯುವಕ ಶವ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾದ ಹಿನ್ನೆಲೆ ಪ್ರಕರಣದ ತನಿಖೆಯನ್ನು ಡಬ್ಲಿನ್ ಪೋಲಿಸರು ನಡೆಸುತ್ತಿದ್ದಾರೆ. ಪತಿಯ ಸಾವಿನ ಸುದ್ದಿ ಕೇಳಿ ಪತ್ನಿ ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬದ ಸಾಂಜೋ ಸುನಿಲ್ ಸಾವು ಕುಟುಂಬಕ್ಕೆ ಭಾರೀ ಆಘಾತ ಉಂಟಾಗಿದೆ.


