Tuesday, August 25, 2026
Homeಜಿಲ್ಲೆಪುತ್ತೂರು : ಪುತ್ತೂರಿನಲ್ಲಿ ಪೊಲೀಸ್ ಹೈ ಅಲರ್ಟ್ : ಯಾವುದೇ ಬಲವಂತದ ಬಂದ್ ನಡೆದಿಲ್ಲ :...

ಪುತ್ತೂರು : ಪುತ್ತೂರಿನಲ್ಲಿ ಪೊಲೀಸ್ ಹೈ ಅಲರ್ಟ್ : ಯಾವುದೇ ಬಲವಂತದ ಬಂದ್ ನಡೆದಿಲ್ಲ : ಎಸ್ಪಿ ಅರುಣ್ ಕುಮಾರ್.

ಪುತ್ತೂರು : ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಪುತ್ತೂರಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಜಿಲ್ಲೆಯಲ್ಲಿ ಇಂದು ಈದ್ ಮಿಲಾದ್ ಆಚರಣೆ ನಡೆಯುತ್ತಿದ್ದು, ಜಿಲ್ಲೆಯಾದ್ಯಂತ ಈದ್ ಮಿಲಾದ್ ಮೆರವಣಿಗೆಗಳು ಶಾಂತಿಯುತವಾಗಿ ನಡೆದಿವೆ. ಪುತ್ತೂರಿನಲ್ಲೂ ಬೆಳಗ್ಗೆ ಈದ್ ಮಿಲಾದ್ ಮೆರವಣಿಗೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಶಾಂತವಾಗಿ ನಡೆದಿದೆ.ಬಂದ್ ಹಿನ್ನೆಲೆಯಲ್ಲಿ ಪುತ್ತೂರು ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈವರೆಗೆ ಪುತ್ತೂರಿನಲ್ಲಿ ಯಾವುದೇ ಬಲವಂತದ ಬಂದ್ ನಡೆದಿಲ್ಲ ಎಂದು ಎಸ್ಪಿ ಅರುಣ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೆಲವೆಡೆ ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಸಹಜ ರಜಾ ದಿನದಂತೆ ಬಂದ್ ಕಂಡುಬಂದಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನು ಉಲ್ಲಂಘನೆ ಕಂಡುಬಂದರೆ ಕಾನೂನು ಪ್ರಕಾರ ಬಂಧನ ಮಾಡಲಾಗುವುದು. ಕೆಲವು ಪ್ರಕರಣಗಳಲ್ಲಿ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು. ಪೊಲೀಸರು ಎಲ್ಲರನ್ನೂ ಒಂದೇ ರೀತಿಯಲ್ಲಿ ನೋಡುತ್ತಿದ್ದು, ಯಾವುದೇ ತಪ್ಪು ಮಾಡದವರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಎಂದು ಎಸ್ಪಿ ತಿಳಿಸಿದ್ದಾರೆ. ಸದ್ಯ ಪುತ್ತೂರಿನ ಪರಿಸ್ಥಿತಿ ಶಾಂತವಾಗಿದ್ದು, ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ.

RELATED ARTICLES

LEAVE A REPLY

Please enter your comment!
Please enter your name here

Most Popular