Wednesday, September 2, 2026
Homeಜಿಲ್ಲೆಪುತ್ತೂರು : ಪುತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತ ವರ್ಸಸ್ ಅಶೋಕ್ ರೈ ಬೆಂಬಲಿಗರ ಸಂಘರ್ಷ, ಮೂವರ ವಿರುದ್ಧ...

ಪುತ್ತೂರು : ಪುತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತ ವರ್ಸಸ್ ಅಶೋಕ್ ರೈ ಬೆಂಬಲಿಗರ ಸಂಘರ್ಷ, ಮೂವರ ವಿರುದ್ಧ ಎಫ್. ಐ. ಆರ್ ದಾಖಲು.

ಪುತ್ತೂರು : ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಹಾಗೂ ಶಾಸಕ ಅಶೋಕ್ ರೈ ಬೆಂಬಲಿಗರ ನಡುವಿನ ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಫ್‌ಐಆರ್ ದಾಖಲಾಗಿದೆ.

ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಪರಸ್ಪರ ಕೈ ಕೈ ಮಿಲಾಯಿಸಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿ ಭಂಗಗೊಳಿಸಿದ ಆರೋಪ ಕೇಳಿಬಂದಿದೆ.

ಪುತ್ತೂರು ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಜಾನ್ಸನ್ ಡಿಸೋಜಾ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

ಮುಂಡೂರು ಗ್ರಾಮದ ಪ್ರವೀಣ್ ಆಚಾರ್ಯ, ಕೂರ್ನಡ್ಕದ ರವೂಫ್, ಬೋಳ್ವಾರಿನ ಹಕೀಂ ಹಾಗೂ ಇತರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ 194(2) ಅಡಿ ಪ್ರಕರಣ ದಾಖಲಾಗಿದೆ. ಇನ್ನೊಂದು ಗಮನಾರ್ಹ ವಿಚಾರವೆಂದರೆ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಎದುರಲ್ಲೇ ಈ ಗಲಾಟೆ ನಡೆದಿತ್ತು ಎನ್ನಲಾಗಿದೆ.

ಶಾಸಕ–ಕಾರ್ಯಕರ್ತರ ನಡುವಿನ ಗಲಾಟೆ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular