Friday, March 13, 2026
Flats for sale
Homeಜಿಲ್ಲೆಪುತ್ತೂರು : ಜೀಪಿಗೆ ಬೈಕ್ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು,ಇಬ್ಬರು ಮಕ್ಕಳಿಗೆ ಗಂಭೀರ ಗಾಯ.

ಪುತ್ತೂರು : ಜೀಪಿಗೆ ಬೈಕ್ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು,ಇಬ್ಬರು ಮಕ್ಕಳಿಗೆ ಗಂಭೀರ ಗಾಯ.

ಪುತ್ತೂರು : ಪುತ್ತೂರು-ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ಬುಧವಾರ ರಾತ್ರಿ ಜೀಪಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.

ಲೋಕೇಶ್ (48) ಮೃತ ವ್ಯಕ್ತಿ. ಮಂಗಳೂರಿನಲ್ಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಇವರು ಪುತ್ತೂರಿನ ಸರ್ವೆ ಗ್ರಾಮದವರು. ಅವರ ಇಬ್ಬರು ಮಕ್ಕಳು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಲೋಕೇಶ್ ಮತ್ತು ಅವರ ಮಕ್ಕಳು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಗೆ ಭೇಟಿ ನೀಡಿ ಹಿಂತಿರುಗುತ್ತಿದ್ದರು. ಡಿಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದ್ದು, ಜೀಪು 50 ಮೀಟರ್ ದೂರದವರೆಗೆ ಬೈಕ್ ಎಳೆದುಕೊಂಡು ಹೋಗಿದೆ.

ಪುತ್ತೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular