Friday, March 13, 2026
Flats for sale
Homeಜಿಲ್ಲೆಪುತ್ತೂರು : ಬೈಕ್ - ಟಿಪ್ಪರ್ ಲಾರಿ ನಡುವೆ ಅಪಘಾತ,ಸವಾರ ಸಾವು.

ಪುತ್ತೂರು : ಬೈಕ್ – ಟಿಪ್ಪರ್ ಲಾರಿ ನಡುವೆ ಅಪಘಾತ,ಸವಾರ ಸಾವು.

ಪುತ್ತೂರು : ಮುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ. ಇನ್ನೋರ್ವ ಸವಾರ ಪವನ್ ಗಂಭೀರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರಲ್ಲಿ ಡಿಯೋವನ್ನು ಚಲಾಯಿಸುತ್ತಿದವರು ಯಾರು ಎಂಬ ಮಾಹಿತಿ ತಿಳಿದುಬಂದಿಲ್ಲ.

ಟಿಪ್ಪರ್ ಹಾಗೂ ಡಿಯೋ ದ್ವಿಚಕ್ರ ವಾಹನಗಳ ನಡುವೆ ಮುರದಲ್ಲಿ ಗುರುವಾರ ಮಧ್ಯಾಹ್ನ ಅಪಘಾತ ಸಂಭವಿಸಿದೆ. ಪುತ್ತೂರಿನಿಂದ ಕಬಕ ಕಡೆ ತೆರಳುತ್ತಿದ್ದ ಡಿಯೋ ಹಾಗೂ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular