ಪುತ್ತೂರು ; ಕಳೆದ ಹಲವು ದಿನಗಳಿಂದ ಸುರಿಯುವ ಮಳೆಯಿಂದಾಗಿ ಕರಾವಳಿ ಭಾಗದ ಜನರ ಜೀವನ ಅಸ್ತವ್ಯಸ್ತವಾಗಿದೆ. ಒಂದೆಡೆ ಮಂಗಳೂರು ಹಾಗೂ ಘಟ್ಟದ ಮೇಲಿನ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ನಲ್ಲಿ ಗುಡ್ಡ ಕುಸಿತದಿಂದ ಸಂಚಾರ ದುಸ್ತರವಾಗಿದೆ. ಮತ್ತೊಂದೆಡೆ, ಚಾರ್ಮಾಡಿ ಘಾಟ್ ರಸ್ತೆಯಲ್ಲಿಯೂ ಅಲ್ಲಲ್ಲಿ ಭೂಕುಸಿತವಾಗುತ್ತಿದೆ. ಇದೀಗ ಸಂಪಾಜೆ ಘಾಟಿಯ ಮೂಲಕ ಮಡಿಕೇರಿ, ಮೈಸೂರಿಗೆ ಸಂಪರ್ಕ ಬೆಸೆಯುವ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲೂ ಭೂಕುಸಿತವಾಗಿ ಸಂಚಾರ ಬಂದ್ ಆಗಿದ್ದು ಬೆಂಗಳೂರು ಹಾಗೂ ಮೈಸೂರು ಕಡೆ ಚಲಿಸುವವರು ಚಾರ್ಮಾಡಿ ರಸ್ತೆ ಮೇಲೆ ಹೋಗುವ ಪರಿಸ್ಥಿತಿ ಉಂಟಾಗಿದೆ.
ವಾಹನ ಸಂಚಾರ ಇಲ್ಲದ ಸಮಯ ಗುಡ್ಡ ಕುಸಿತವಾಗಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಶುಕ್ರವಾರ ಮುಂಜಾನೆ ಗುಡ್ಡ ಕುಸಿದು ಬಿದ್ದಿದೆ. ಪರಿಣಾಮವಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸದ್ಯ ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ ಪುತ್ತೂರು ಸಿಟಿ ಮೂಲಕ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.ಸದ್ಯ ಹೆದ್ದಾರಿ ಮೇಲೆ ಬಿದ್ದಿರುವ ಮಣ್ಣು ತೆರವು ಮಾಡುವ ಕಾರ್ಯಾಚರಣೆ ನಡೆಯುತ್ತಿದೆ.
ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಶುಕ್ರವಾರ ಮುಂಜಾನೆ ಗುಡ್ಡ ಕುಸಿದು ಬಿದ್ದಿದೆ. ವಾಹನ ಸಂಚಾರ ಇಲ್ಲದ ಸಮಯ ಗುಡ್ಡ ಕುಸಿತವಾಗಿದ್ದರಿಂದ ಭಾರಿ ಅನಾಹುತ ತಪ್ಪಿದೆ.
ಪರಿಣಾಮವಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸದ್ಯ ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ ಪುತ್ತೂರು ಸಿಟಿ ಮೂಲಕ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.ಸದ್ಯ ಹೆದ್ದಾರಿ ಮೇಲೆ ಬಿದ್ದಿರುವ ಮಣ್ಣು ತೆರವು ಮಾಡುವ ಕಾರ್ಯಾಚರಣೆ ನಡೆಯುತ್ತಿದೆ.


