ಪುತ್ತೂರು : ಪುತ್ತೂರಿನಲ್ಲಿ ಅಶೋಕ್ ರೈ ನೇತೃತ್ವದಲ್ಲಿ ಇಂದುಅಶೋಕ ಜನಮನ ಕಾರ್ಯಕ್ರಮ ನಡೆದಿತ್ತು ಈ ಕಾರ್ಯಕ್ರಮಕ್ಕೆ ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ್ದರು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು, ಉಂಟಾಗಿದ್ದು 11ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ.
11ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದು ಮಹಿಳೆಯರು, ಮಕ್ಕಳು ಸೇರಿದ್ದಾರೆ. ಕ್ರೀಡಾಂಗಣದ ಸಾಮರ್ಥ್ಯಕ್ಕಿಂದ ಹೆಚ್ಚು ಜನ ಭಾಗಿಯಾಗಿದ್ದು ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ ಅಸ್ವಸ್ಥರಾಗಿದ್ದರೆಂದು ತಿಳಿದುಬಂದಿದೆ.
ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆ ಉಂಟಾಗಿದ್ದು ಕುಡಿಯಲು ನೀರು ಸಿಗದೆ ಜನರ ಪರದಾಡಿದ್ದಾರೆ. ಮಹಿಳೆಯರು ಸಣ್ಣ ಸಣ್ಣ ಮಕ್ಕಳನ್ನು ಕಾರ್ಯಕ್ರಮಕ್ಕೆ ಹಿಡಿದುಕೊಂಡು ಬಂದಿದ್ದ ಹಿನ್ನೆಲೆ ನೂಕು ನುಗ್ಗಲು ಉಂಟಾಗಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ದೀಪಾವಳಿ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತಟ್ಟೆ,ವಸ್ತ್ರ ಹಂಚುವ ಶಾಸಕ ಅಶೋಕ್ ರೈ ಮಾಲಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಕಾರ್ಯಕ್ರಮ ಇದಾಗಿದ್ದು ಸಿ.ಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದ್ದರು ಅಶೋಕ ಜನಮನ ಕಾರ್ಯಕ್ರಮದಲ್ಲಿ ಅವ್ಯವಸ್ಥೆಯ ಆಗರದಿಂದ ಕಾಲ್ತುಳಿತ ಉಂಟಾಗಿದ್ದು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಸೇರಿ ಅಸ್ವಸ್ಥರಾದವರಿಗೆ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.