Monday, December 15, 2025
Flats for sale
Homeಜಿಲ್ಲೆಬಂಟ್ವಾಳ : ಅಕ್ರಮ ಗೋಸಾಗಾಟ ಮಾಡುತ್ತಿದ್ದ ಆರೋಪಿಯ ಮನೆ,ಕೊಟ್ಟಿಗೆ ಜಪ್ತಿ.

ಬಂಟ್ವಾಳ : ಅಕ್ರಮ ಗೋಸಾಗಾಟ ಮಾಡುತ್ತಿದ್ದ ಆರೋಪಿಯ ಮನೆ,ಕೊಟ್ಟಿಗೆ ಜಪ್ತಿ.

ಬಂಟ್ವಾಳ : ಡಿ. 13 ರಂದು ಸಂಜೆ, ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ತೆರಳಿ, KA-70-8686 ನೇ ನೊಂದಣಿಯ ಸದ್ರಿ ಗೂಡ್ಸ್ ಅಟೋವನ್ನು ತಡೆದು ಪರಿಶೀಲಿಸಿದಾಗ, ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡು ಬಂದಿದ್ದು . ವಾಹನದ ಚಾಲಕರಲ್ಲಿ ಈ ಬಗ್ಗೆ ವಿಚಾರಿಸಿದಾಗ, ಅತನು ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ(56) ಎಂಬುದಾಗಿ ತಿಳಿಸಿದ್ದಾರೆ.

ಬಂಟ್ವಾಳ ಸರಪ್ಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ ಪರವಾನಿಗೆ ಇಲ್ಲದೇ ಎಲ್ಲಿಯೋ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಕಾನೂನುಕ್ರಮಕ್ಕಾಗಿ ಜಾನುವಾರು, ಅಟೋ ಹಾಗು ಒಂದು ಮೊಬೈಲ್ ಫೋನ್ ನ್ನು ವಶಕ್ಕೆ ಪಡೆದು, ಅರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ ಅಡಿ ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಆರೋಪಿ ಭೋಜ ಮೂಲ್ಯ ರವರ ಮನೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular