Tuesday, November 4, 2025
Flats for sale
HomeUncategorizedಬಂಟ್ವಾಳ : ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ : ಮತ್ತೋರ್ವನ ಬಂಧನ, ಬಂಧಿತರ ಸಂಖ್ಯೆ 11ಕ್ಕೆ...

ಬಂಟ್ವಾಳ : ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ : ಮತ್ತೋರ್ವನ ಬಂಧನ, ಬಂಧಿತರ ಸಂಖ್ಯೆ 11ಕ್ಕೆ ಏರಿಕೆ..!

ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಎಂಬಲ್ಲಿ ನಡೆದ ಅಬ್ದುಲ್ ರೆಹಮಾನ್ ಅವರ ಭೀಕರ ಕೊಲೆ ಮತ್ತು ಕಲಂದರ್ ಶಾಫಿ ಅವರ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಅಲಿಯಾಸ್ ಸಾಹಿತ್ (24) ಎಂದು ಗುರುತಿಸಲಾಗಿದೆ. ಈತನ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರಾದ ಒಟ್ಟು ಆರೋಪಿಗಳ ಸಂಖ್ಯೆ 11 ಕ್ಕೆ ಏರಿದೆ.ಶಾಹಿತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಮೇ 27 ರಂದು, ಅಬ್ದುಲ್ ರೆಹಮಾನ್‌ನನ್ನು ಪರಿಚಯಸ್ಥರ ಗುಂಪೊಂದು ಮಾರಕ ಆಯುಧಗಳನ್ನು ಬಳಸಿ ಕಡಿದು ಹತ್ಯೆಮಾಡಿತ್ತು . ಆ ಸಮಯದಲ್ಲಿ ಅವನ ಜೊತೆಗಿದ್ದ ಅವನ ಸ್ನೇಹಿತ ಕಲಂದರ್ ಶಫಿ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಘಟನೆಯ ನಂತರ ಹಲ್ಲೆಕೋರರು ಸ್ಥಳದಿಂದ ಪರಾರಿಯಾಗಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಜನರನ್ನು ಬಂಧಿಸಿ ಹೆಡೆಮೂರಿಕಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular