ಮಂಗಳೂರು : ರಸ್ತೆ ದಾಟಲು ಯತ್ನಿಸುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ಡಿಕ್ಕಿ ರಭಸಕ್ಕೆ 15 ಅಡಿ ದೂರಕ್ಕೆಎಸೆದ ಆಘಾತಕಾರಿ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆಯಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಗೊಂಡ ಮಹಿಳೆಯನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ನಿವಾಸಿ ಭಾರತಿ (48) ಎಂದು ಗುರುತಿಸಲಾಗಿದೆ.
ಭಾರತಿ ತನ್ನ ಮಗಳು ದೀಪಶ್ರೀ ಜೊತೆ ಗುಳಿಗ ದೈವದ ಕಟ್ಟೆಗೆ ಪ್ರಾರ್ಥನೆ ಸಲ್ಲಿಸಲು ಸಜಿಪಮೂಡ ಗೆ ಬಂದಿದ್ದರು. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಲು ಪ್ರಯತ್ನಿಸುತ್ತಿದ್ದಾಗ, ಮೆಲ್ಕಾರ್‌ನಿಂದ ಮುಡಿಪು ಕಡೆಗೆ ಹೋಗುತ್ತಿದ್ದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಮಹಿಳೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಡಿಕ್ಕಿಯ ರಭಸಕ್ಕೆ ಮಹಿಳೆ ದೂರಕ್ಕೆ ಎಸೆಯುವ ವಿಡಿಯೋ ನೋಡಿದಂತೆ ಮೈ ಜುಮ್ಮೆನ್ನೆತ್ತದೆ.


