ಬಂಟ್ವಾಳ : ಬಂಟ್ವಾಳದಲ್ಲಿ ಯುವಕನ ಮೇಲೆ ತಲ್ವಾರ್ ದಾಳಿ ನಡೆದಿದೆ ಎಂಬ ಮಾಹಿತಿ ದೊರೆತಿದೆ .ದಾಳಿಗೊಳಗಾದವನನ್ನು ಕೊಳತ್ತಮಜಲ್ ಅಬ್ದುಲ್ ರೆಹಮಾನ್ ಎಂದು ತಿಳಿದು ಬಂದಿದೆ.

ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ. ಇಂತಿಯಾಜ್ ಜೊತೆ ಇನ್ನೊಬ್ಬ ಕಲಂದರ್ ಎಂಬಾತ ಇದ್ದು ಆತನ ಮೇಲು ದಾಳಿ ನಡೆದಿದೆ . ಆದರೆ ಆತನಿಗೆ ಕೈಗೆ ಗಾಯ ವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಬೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ DG &IGP ಹಾಗೂ ಕಾನೂನು ಸುವ್ಯವಸ್ಥೆ ADGP ಅವರಿಗೆ ದೂರವಾಣಿ ಮೂಲಕ ಮಾತನಾಡಿದ ಸಚಿವರು, ಸೂಕ್ತ ಬಿಗಿ ಕಾನೂನು ಕ್ರಮಗಳನ್ನ ಜರುಗಿಸುವಂತೆ ಸೂಚನೆ ನೀಡಿದರು. ಅಲ್ಲದೇ ಮಂಗಳೂರು ಜಿಲ್ಲಾಧಿಕಾರಿ ಹಾಗೂ ಎಸ್.ಪಿ ಅವರೊಂದಿಗೆ ಮಾತನಾಡಿದ ಸಚಿವರು ಮಂಗಳೂರಿನಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.


