ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮುಲ್ಕಾಜೆ ಮಾಡದಲ್ಲಿ ಹಾಡಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿ ನಾಲ್ವರು ದರೋಡೆ ನಡೆಸಿದ್ದಾರೆ.

ಸುರತ್ಕಲ್ ನಿವಾಸಿ ಮಯ್ಯದಿ ಎಂಬವರು ವಿವಿಧ ಅಂಗಡಿಗಳಿಗೆ ಹೋಲ್ಸೇಲ್ನಲ್ಲಿ ನೀಡಿದ್ದ ಸಿಮೆಂಟ್ನ ಹಣ ವಸೂಲಿ ಮಾಡಿಕೊಂಡು ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ.
ಎರಡು ಬೈಕ್ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ತಲವಾರು ತೋರಿಸಿ ಬೆದರಿಸಿ ಹಣವಿದ್ದ ಬ್ಯಾಗ್ನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.
ಬ್ಯಾಗ್ನಲ್ಲಿ ಸುಮಾರು ₹8 ಲಕ್ಷಕ್ಕೂ ಅಧಿಕ ಹಣ ಇತ್ತು ಎನ್ನಲಾಗಿದೆ. ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

