Thursday, February 26, 2026
Flats for sale
Homeರಾಜ್ಯಬಾಗಲಕೋಟೆ : ಇನ್‌ಸ್ಟಾಗ್ರಾಮ್ ನಲ್ಲಿ ಧರ್ಮದ ಕುರಿತು ವಿವಾದಾತ್ಮಕ ಪೋಸ್ಟ್ : ಯುವಕನ ವಿರುದ್ಧ ಪ್ರಕರಣ...

ಬಾಗಲಕೋಟೆ : ಇನ್‌ಸ್ಟಾಗ್ರಾಮ್ ನಲ್ಲಿ ಧರ್ಮದ ಕುರಿತು ವಿವಾದಾತ್ಮಕ ಪೋಸ್ಟ್ : ಯುವಕನ ವಿರುದ್ಧ ಪ್ರಕರಣ ದಾಖಲು.

ಬಾಗಲಕೋಟೆ : ಇನ್‌ಸ್ಟಾಗ್ರಾಮ್ ಖಾತೆಯಿಂದ ಧರ್ಮದ ವಿಷಯಕ್ಕೆ ಸಂಬಂಧಿಸಿದಂತೆ ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ ಗ್ರಾಮದ ನಿವಾಸಿ ನಿಸಾರ್ (19) ಎಂಬಾತ ವಿವಾದಾತ್ಮಕ ಸಂದೇಶ ಪೋಸ್ಟ್ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಪೋಸ್ಟ್‌ ಧರ್ಮಗಳ ನಡುವೆ ದ್ವೇಷ ಭಾವನೆ ಉಂಟುಮಾಡುವಂತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ ದಾಖಲಿಸಿಕೊಂಡು, ಸಂಬಂಧಿತ ಕಲಂ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆದು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ ಪ್ರಕಟಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular