ಬೀದರ್ : ನಗರದ ಗಾಂಧಿ ವೃತ್ತ, ಕೋಟೆ ಪ್ರದೇಶ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಹರಳಯ್ಯ ವೃತ್ತ ಹಾಗೂ ತ್ರಿಪುರಾಂತ ಪ್ರವಾಸಿ ಮಂದಿರ ಬಳಿ ಬಿಕ್ಷಾಟನೆಯಲ್ಲಿ ತೊಡಗಿದ ಮಕ್ಕಳ ರಕ್ಷಣೆ.
ಮಕ್ಕಳನ್ನು ವಶಕ್ಕೆ ಪಡೆದ ಅಧಿಕಾರಿಗಳ ತಂಡ, ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಿ, ನಂತರ ಪಾಲಕರಿಗೆ ಒಪ್ಪಿಸಲಾಯಿತು.
ಮಕ್ಕಳನ್ನು ಬಿಕ್ಷಾಟನೆಗೆ ಬಳಸಿಕೊಳ್ಳುವುದು ಬಾಲ ನ್ಯಾಯ ಕಾಯ್ದೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು, ಇನ್ನು ಮುಂದೆ ಮಕ್ಕಳನ್ನು ಬಿಕ್ಷಾಟನೆಗೆ ಬಳಸಿಕೊಂಡಲ್ಲಿ ಸಂಬಂಧಿತ ಪಾಲಕರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಕರಿಗೆ ಅಧಿಕಾರಿಗಳು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ
ವಿನೋದ್ ಕೂರೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೌತಮ್ ಸಿಂದೆ, ಸಮಾಜ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದಿಲೀಪ್. ಹಾಗೂ ಸಾರ್ವಜ ಶಿಕ್ಷಣ ಇಲಾಖೆಯ ಸಿಆರ್’ಪಿಗಳು ಮತ್ತು ಕಾರ್ಮಿಕ ಇಲಾಖೆ ಸಿಬ್ಬಂದಿಗಳು ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು


