Saturday, July 18, 2026
Homeರಾಜ್ಯಬೀದರ್ : ಬ್ರಿಮ್ಸ್ ಆಸ್ಪತ್ರೆಯಲ್ಲಿ ಮೃತ ಮಹಿಳೆಯರ ಬೆತ್ತಲೆ ಫೋಟೋ ಶೂಟ್ ಆರೋಪ,ಅಟೆಂಡರ್ ಮುನೀರ್ ಅಹ್ಮದ್...

ಬೀದರ್ : ಬ್ರಿಮ್ಸ್ ಆಸ್ಪತ್ರೆಯಲ್ಲಿ ಮೃತ ಮಹಿಳೆಯರ ಬೆತ್ತಲೆ ಫೋಟೋ ಶೂಟ್ ಆರೋಪ,ಅಟೆಂಡರ್ ಮುನೀರ್ ಅಹ್ಮದ್ ವಿರುದ್ಧ ಪ್ರಕರಣ ದಾಖಲು.

ಬೀದರ್ : ಬೀದರ್‌ನ BRIMS ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.ಶವಾಗಾರ ವಿಭಾಗದ ಅಟೆಂಡರ್ ಮುನೀರ್ ಅಹ್ಮದ್ ಎಂಬಾತ ಮೃತ ಮಹಿಳೆಯರ ಬೆತ್ತಲೆ ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ಕ್ಲಿಕ್ಕಿಸಿ ಸಂಗ್ರಹಿಸಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಪಿಎಂಇ ವೇಳೆ ಅನುಮತಿ ಇಲ್ಲದೆ ಫೋಟೋ ತೆಗೆದುಕೊಳ್ಳಲಾಗುತ್ತಿತ್ತು ಎಂದು ತಿಳಿದುಬಂದಿದೆ. ಮೃತ ಮಹಿಳೆಯರ ದೇಹದ ಮೇಲಿನ ಬಟ್ಟೆ ತೆಗೆದು ಚಿತ್ರ ತೆಗೆಯಲಾಗುತ್ತಿತ್ತು ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಘಟನೆ ಬೆಳಕಿಗೆ ಬಂದ ಬಳಿಕ ಶವಾಗಾರ ವಿಭಾಗದ ಮುಖ್ಯಸ್ಥ ಡಾ. ಮೋಸಿನ್ ಉಲ್ ಹಕ್ ಅವರು ನ್ಯೂ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಸಂಬಂಧ BNS ಕಲಂ 301 ಮತ್ತು 62 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಘಟನೆ ವೈದ್ಯಕೀಯ ಗೌಪ್ಯತೆ ಮತ್ತು ಮೃತರ ಗೌರವದ ಪ್ರಶ್ನೆ ಎಬ್ಬಿಸಿದ್ದು, ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular