ಬೀದರ್ ; ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ಹಾಲಿ ಸಚಿವ ಈಶ್ವರ್ ಖಂಡ್ರೆಯವರ ತಂದೆಯವರು ವಿಧಿವಶರಾಗಿದ್ದಾರೆ.

ವಯೋಸಹಜ ಖಾಯಿಲೆಯಿಂದ ಬಳಲುತ್ರಿದ್ದ ಭೀಮಣ್ಣ ಖಂಡ್ರೆ(102) ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ರಾಜ್ಯದ ಪ್ರಭಾವಿ ಸಚಿವ ಈಶ್ವರ್ ಖಂಡ್ರೆ ಅವರ ತಂದೆಯಾಗಿರುವ ಭೀಮಣ್ಣ ಖಂಡ್ರೆ ಹಲವು ದಿನಗಳಿಂದ ಬೀದರ್ ನಗರದ ಗುದಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ನಾಲ್ಕು ದಿನಗಳ ಹಿಂದೆ ಮನೆಗೆ ಕರೆ ತಂದು ಚಿಕಿತ್ಸೆ ಮುಂದುವರಿಸಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಾಣದೆ ರಾತ್ರಿ 11:00 ಸುಮಾರಿಗೆ ಕೊನೆ ಉಸಿರೆಳೆದಿದ್ದಾರೆ.
ಬೀದರ್ ಜಿಲ್ಲೆಯ ಧೀಮಂತ ರಾಜಕಾರಣಿ ಮಾಜಿ ಸಚಿವ ಭೀಮಣ್ಣ ಖಂಡ್ರೆಯವರಿಗೆವಯೋಸಹಜ ಕಾಯಿಲೆ ಹಿನ್ನೆಲೆ ಉಸಿರಾಟ ತೊಂದರೆ, ಬಿಪಿಯಲ್ಲಿ ಏರುಪೇರಾಗಿತ್ತು, ಇವರು ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮದೆಯಾದ ಛಾಪು ಮೂಡಿಸಿದ್ದು 4 ಬಾರಿ ಶಾಸಕರು, 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ರಾಜ್ಯದ ಸಾರಿಗೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಭಾಲ್ಕಿ ವಿಧಾನಸಭಾ ಕ್ಷೇತ್ರದಿಂದ 4 ಸಲ ಶಾಸಕರಾಗಿ ಆಯ್ಕೆಯಾಗಿದ್ದು 1962, 1967, 1978 ಮತ್ತು 1983 ರಲ್ಲಿ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ.
1992 ರಲ್ಲಿ ಮೊಯ್ಲಿ ಸರ್ಕಾರದ ಕ್ಯಾಬಿನೆಟ್‌ನಲ್ಲಿ ಸಾರಿಗೆ ಸಚಿವರಾಗಿದ್ದರು.
1994 ಹಾಗೂ 2000 ರಲ್ಲಿ ಎರಡು ಸಲ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.
1953 ರಲ್ಲಿ ಭಾಲ್ಕಿ ಪುರಸಭೆ ಅಧ್ಯಕ್ಷರಾಗಿ ರಾಜಕೀಯ ಆರಂಭಿಸಿದ ಭೀಮಣ್ಣ ಖಂಡ್ರೆ ನಂತರ 1988 ರಲ್ಲಿ ಬೀದರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ರು,ಇವರ ತಂದೆ ಶಿವಲಿಂಗಪ್ಪ ಖಂಡ್ರೆ, ತಾಯಿ ಪಾರ್ವತಿಭಾಯಿ ಖಂಡ್ರೆಯವರ
ಇವರು ಹುಲಸೂರು ತಾಲೂಕಿನ ಗೊರ್ಟಾ(ಬಿ) ಗ್ರಾಮ ಜನವರಿ 8, 1923 ರಂದು ಜನಸಿದ್ದರು ಇವರಿಗೆಮೂವರು ಪುತ್ರರು, ಐದು ಜನ ಪುತ್ರಿಯವರನ್ನು ಇದ್ದಾರೆ.


