Saturday, November 23, 2024
Flats for sale
Homeವಿದೇಶಬೆಂಗಳೂರು : ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿರುವ 24 ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಮಾಡಿದ ಎನ್‌ಐಎ.

ಬೆಂಗಳೂರು : ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿರುವ 24 ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಮಾಡಿದ ಎನ್‌ಐಎ.

ಬೆಂಗಳೂರು : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಬೆಂಗಳೂರಿನಲ್ಲಿ ಅಕ್ರಮವಾಗಿ ತಂಗಿದ್ದ 24 ಬಾಂಗ್ಲಾದೇಶಿ ಪ್ರಜೆಗಳನ್ನು ಪತ್ತೆ ಹಚ್ಚಿ ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಮೂಲಗಳು ಶುಕ್ರವಾರ ಖಚಿತಪಡಿಸಿವೆ.

ನಗರದ ಬೆಳ್ಳಂದೂರು ಪ್ರದೇಶದಲ್ಲಿ ಸೋಮವಾರ ನಡೆದ ಶೋಧ ಕಾರ್ಯಾಚರಣೆಯಲ್ಲಿ ಮೂವರು ಅಕ್ರಮ ಬಾಂಗ್ಲಾ ವಲಸಿಗರಾದ ಖಲೀಲ್ ಚಪರಾಸಿ, ಅಬ್ದುಲ್ ಖಾದಿರ್ ಮತ್ತು ಮೊಹಮ್ಮದ್ ಜಹೀದ್ ಅವರನ್ನು ಎನ್‌ಐಎ ಪತ್ತೆಹಚ್ಚಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಪ್ರಸ್ತುತ ಬೆಳ್ಳಂದೂರು ಪೊಲೀಸರ ವಶದಲ್ಲಿರುವ ವಲಸಿಗರು 2011 ರಿಂದ ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

20,000 ರೂಪಾಯಿ ಕೊಟ್ಟು ಬ್ರೋಕರ್ ಸಹಾಯದಿಂದ ದೇಶ ಪ್ರವೇಶಿಸಿದ್ದಾರೆ.

ಅಕ್ರಮ ವಲಸಿಗರು ಆಧಾರ್ ಕಾರ್ಡ್‌ಗಳು, ಪಡಿತರ ಚೀಟಿಗಳು ಮತ್ತು ಇತರ ಸರ್ಕಾರಿ ಗುರುತಿನ ಚೀಟಿಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂಬಂಧ ಸ್ಥಳೀಯ ಪೊಲೀಸರು ವಿದೇಶಿಯರ ಕಾಯಿದೆಯಡಿ ಸೆಕ್ಷನ್ 14 (ಸಿ), 14 (ಎ) ಮತ್ತು ಪಾಸ್‌ಪೋರ್ಟ್ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular