ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಸರೋವರ್ (76) ಇಂದು ನಿಧನರಾಗಿದ್ದಾರೆ. ಸುದೀಪ್ ಅಭಿಮಾನಿಗಳು, ಚಿತ್ರರಂಗ, ರಾಜಕೀಯ ಗಣ್ಯರು ಅಂತಿಮ ದರ್ಶನ ಪಡೆದು
ಕಂಬನಿ ಮಿಡಿದರು.
ಉಡುಪಿಯ ಕಾರ್ಕಳ ಮೂಲದವರಾದ ಸರೋಜ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಬೆಳಗ್ಗೆ ೭ಗಂಟೆ ಸುಮಾರಿಗೆ ನಗರದ ಅಪಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ 12 ಗಂಟೆಯ ವೇಳೆಗೆ ಜೆಪಿ ನಗರದ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ನಟ ಕಿಚ್ಚ ಸುದೀಪ್
ಅವರು ಕೂಡ ಅಂಬುಲೆನ್ಸ್ನಲ್ಲಿಯೇ ಮನೆಗೆ ತೆರಳಿದ್ದಾರೆ. ಮನೆ ಬಳಿ ಅಂತಿಮ ದರ್ಶನಕ್ಕೆ ಶಾಮಿಯಾನ ಹಾಕಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸುದೀಪ್ ಮನೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ ಮಾಡಿದ್ದು, ಮನೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ನೀ ಡಲಾಗಿದೆ. ಸAಜೆ 5 ಗಂಟೆಗೆ ವಿಲ್ಸನ್ ಗಾರ್ಡನ್‌ನಲ್ಲಿರುವ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರೋಜ ಸರೋವರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ‘’ಖ್ಯಾತ ಚಲನಚಿತ್ರ ನಟ ಹಾಗೂ ಆತ್ಮೀಯರಾದ ಸುದೀಪ್ ಅವರ ತಾಯಿ ಶ್ರೀಮತಿ ಸರೋಜಾ ಅವರು ನಿಧನರಾಗಿರುವ ಸುದ್ದಿ ತಿಳಿದುತೀವ್ರ ದುಃಖಿತನಾಗಿದ್ದೇನೆ. ನಟ ಸುದೀಪ್ ಹಾಗೂ ಅವರ ಕುಟುಂಬ ವರ್ಗದವರಿಗೆ ಅವರ ತಾಯಿಯನಿಧನದ ದುಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ’’ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.