ಬೆಂಗಳೂರು : ಸಾಲ ಪಡೆದು ಮರು ಪಾವತಿಸದ ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ವಿವಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನಲ್ಲಿ ಸಾಲ ಪಡೆದು ಪಾವತಿಸದೇ ಮೋಸ ಮಾಡುವ ಉದ್ದೇಶ ಹೊಂದಿದ್ದಾರೆ ಎAದು ಬ್ಯಾಂಕ್ ಮ್ಯಾನೇಜರ್ ರಾಜಣ್ಣ ವಿವಿಪುರಂ ಠಾಣೆಯಲ್ಲಿ ದೂರು ನೀಡಿದ್ದು, ಅದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.
ಬೆಳಗಾವಿಯ ಗೋಕಾಕ್ ಫಾಲ್ಸ್ ರಸ್ತೆಯಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್ ಕಂಪನಿಯ ಅಧ್ಯಕ್ಷ ರಮೇಶ್ ಜಾರಕಿಹೊಳಿ, ನಿರ್ದೇಶಕ ವಸಂತ್ ವಿ. ಪಾಟೀಲ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶಂಕರ್ ಎ. ಪಾವಡೆ ಅವರು ಕಾರ್ಖಾನೆ ಸ್ಥಾಪನೆ, ವಿಸ್ತರಣೆಮತ್ತು ನಿರ್ವಹಣೆಯ ಹಣಕ್ಕಾಗಿ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ನಿ ಯಮಿತ ಕೇಂದ್ರ ಕಛೇರಿಗೆ ಅರ್ಜಿಸಲ್ಲಿಸಿದರು.
ಆರೋಪಿಗಳು ಬ್ಯಾಂಕ್‌ನವರು ವಿಧಿಸಿದ ಷರತ್ತುಗಳನ್ನು ಒಪ್ಪಿ,ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್ ಮತ್ತು ಇದರ ಸಮೂಹ ಬ್ಯಾಂಕ್‌ಗಳಾದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ತುಮಕೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮತ್ತು ಉತ್ತರ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತಗಳಲ್ಲಿ 2013ರ ಡಿಸೆಂಬರ್ 7 ರಿಂದ 2017 ರ ಮಾರ್ಚ್ 31ರ ವರೆಗೆ ಹಂತ ಹಂತವಾಗಿ 232 ಕೋಟಿ 88 ಲಕ್ಷ ರೂ. ಸಾಲ ಪಡೆದರು. ಆದರೆ ಆರೋಪಿಗಳು ಸಾಲದ ಹಣವನ್ನು ಕಟ್ಟದೆ 439 ಕೋಟಿ 7 ಲಕ್ಷ ರೂ. ಬಾಕಿ ಉಳಿಸಿಕೊಂಡಿದ್ದಾರೆ.
ಅಲ್ಲದೇ ಆರೋಪಿಗಳು ಸಾಲ ಪಡೆಯುವ ಸಮಯದಲ್ಲಿ ಸೌಭಾಗ್ಯ, ಲಕ್ಷ್ಮಿ ಶುಗರ್ಸ್ ಲಿಮಿಟೆಡ್ ಕಂಪನಿಯ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರಾಗಿದ್ದರು. ಆದರೆ ಸಾಲ ಪಡೆದ ನಂತರ, ಅದನ್ನು ತೀರಿಸದೆ ಕಂಪನಿಯ ಜವಾಬ್ದಾರಿಯಿಂದ ಹೊರಬಂದು,ಬೇರೆಯವರನ್ನು ಅಧಿಕಾರಕ್ಕೆ ನೇಮಿಸಿದ್ದಾರೆ.
ಆದರೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಷರತ್ತಿನ ಪ್ರಕಾರ, ಸಾಲವನ್ನು ಮಂಜೂರು ಮಾಡುವ ಸಮಯದಲ್ಲಿ, ಸಾಲ ಮರುಪಾವತಿಯಾಗುವವರೆಗೆ ಬ್ಯಾಂಕ್‌ನ ಅನುಮತಿ ಇಲ್ಲದೇ ಕಂಪನಿಯ (ಆಡಳಿತ ಮಂಡಳಿಯ) ವ್ಯವಸ್ಥಾಪಕ ನಿರ್ದೇಶಕ ಆಗಲಿ. ನಿರ್ದೇಶಕರನ್ನಾಗಲಿ ಬದಲಾಯಿಸುವಂತಿಲ್ಲ. ಆದರೆ ಇಲ್ಲಿ ಬದಲಾಯಿಸಲಾಗಿದೆ.
ಆರೋಪಿಗಳು ತಾವು ಪಡೆದ ಸಾಲವನ್ನು ಬ್ಯಾಂಕ್‌ಗೆ ಮರುಪಾವತಿ ಮಾಡುವುದರಿಂದ ತಪ್ಪಿಸಿಕೊಂಡು ಬ್ಯಾಂಕ್‌ಗೆ ಮೋಸ ಮಾಡಬೇಕೆಂಬ ಉದ್ದೇಶದಿAದ ಬ್ಯಾಂಕ್‌ನವರಿಗೆ ಯಾವುದೇ ಮಾಹಿತಿ ನೀಡದೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್ ಕಂಪನಿಯ ಆಡಳಿತ ಮಂಡಳಿಯಿAದ ತಮ್ಮ ಹುದ್ದೆಗಳಿಂದ ಹೊರಬಂದು ಸಂಬAಧವಿಲ್ಲದ ವ್ಯಕ್ತಿಗಳನ್ನು ಕಂಪನಿಗೆ ನಿರ್ದೇಶಕರನ್ನಾಗಿ ನೇಮಿಸಿ ಬ್ಯಾಂಕ್‌ನವರಿಗೆ ನಂಬಿಕೆ ದ್ರೋಹವೆಸಗಿ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ.
ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 420 (ವಂಚನೆ) ಪ್ರಕರಣದ ಎ1 ಶಾಸಕ ರಮೇಶ್ ಜಾರಕಿಹೊಳಿ, ವಸಂತ್ ವಿ. ಪಾಟೀಲ್, ಶಂಕರ್ಪ ವಾಡೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.