ಬೆಂಗಳೂರು : ಮುಂಬರುವ ದಿನಗಳಲ್ಲಿ ಅರಣ್ಯ ಪ್ರದೇಶದಲ್ಲಿ ಸಿನಿಮಾ, ಸಾಕ್ಷ್ಯ ಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣ ನಡೆಸಬೇಕಾದರೆ ಸರ್ಕಾರದಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ.
ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಸ್ಪಷ್ಟ ನೋಟಿಸ್ ನೀಡಿದ ಸಚಿವರು ಚಲನಚಿತ್ರ, ದೂರದರ್ಶನ ಸಾಕ್ಷ್ಯ ಚಿತ್ರ, ಸರಣಿ ಇತ್ಯಾದಿಗಳ ಚಿತ್ರೀಕರಣಕ್ಕಾಗಿ ನಿಗದಿತ ಶುಲ್ಕವನ್ನು ನೀಡಲಾಗಿದೆ.ಅಲ್ಲದೆ, ಸ್ಥಳೀಯ ಮಟ್ಟದಲ್ಲಿ ಅಧಿಕಾರಿಗಳು ಅನುಮತಿ ನೀಡುವುದರಿಂದ ಕಾಡಿನ ಗೌಪ್ಯ ಮಾಹಿತಿಯು ಹೊರಗಿನ ಜಗತ್ತಿಗೆ ಲಭ್ಯವಾಗುವ ಸಾಧ್ಯತೆಯಿದೆ. ಇದು ಪರಿಸರ ಮತ್ತು ಜೀವವೈವಿಧ್ಯತೆಗೆ ಧಕ್ಕೆ ತರುತ್ತದೆ ಎಂದು ಸಚಿವರು ಹೇಳಿದ್ದಾರೆ.
ಅರಣ್ಯ ಮತ್ತು ವನ್ಯಜೀವಿಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಮತ್ತು ಪ್ರಕೃತಿಯನ್ನು ಹಸ್ತಾಂತರಿಸುವ ನಿಟ್ಟಿನಲ್ಲಿ ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ರೀತಿಯ ಚಿತ್ರೀಕರಣಕ್ಕೆ ಸರ್ಕಾರದಿಂದ ಕಡ್ಡಾಯವಾಗಿ ಅನುಮತಿ ನೀಡುವಂತೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಸಚಿವ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.