Thursday, July 23, 2026
Homeರಾಜ್ಯಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣ : ನಾವೇನು ದೂರು ಕೊಟ್ಟಿಲ್ಲ, ನಮ್ಮನ್ನು ಯಾಕೆ ಎಳೆದು...

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣ : ನಾವೇನು ದೂರು ಕೊಟ್ಟಿಲ್ಲ, ನಮ್ಮನ್ನು ಯಾಕೆ ಎಳೆದು ತರುತ್ತೀರಿ ಎಂದು SIT ತನಿಖೆಗೆ ಪ್ರತ್ಯುತ್ತರ ನೀಡಿದ ಸಂತ್ರಸ್ತೆಯರು.

ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಇದೊಂದು ರಾಜಕೀಯ ಕ್ಷಡ್ಯಂತ್ರ್ಯ ವಾಗಿದ್ದು ಇದರ ಹಿಂದೆ ಹಲವು ಕಾಂಗ್ರೆಸ್ ದಿಗ್ಗಜರು ಇದ್ದರೆಂದು ಕುಮಾರಸ್ವಾಮಿ ಡಿ.ಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಈ ನಡುವೆ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಪ್ರಕರಣದ ಆರೋಪಿಗಳಾದ ಪ್ರಜ್ವಲ್ ರೇವಣ್ಣ ಮತ್ತು ಎಚ್​ಡಿ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ವಿಡಿಯೋ ಬಿಡುಗಡೆ ಮಾಡುವಾಗ ಬ್ಲರ್ ಮಾಡದ್ದೆ ಇದ್ದದ್ದು ಹೆಣ್ಣು ಮಕ್ಕಳು ಇದರಿಂದ ಹೊರಗಡೆ ತಲೆ ಎತ್ತಿ ತಿರುಗುವಂತೆ ಆಗುತ್ತಿಲ್ಲ ಎಂದು ವಿಚಾರಣೆಯ ಅಧಿಕಾರಿಗಳಿಗೆ ಸಂತ್ರಸ್ಥರು ತಿಳಿಸಿದ್ದಾರೆ. ಈ ಬಗ್ಗೆ ನಮ್ಮ ಬಳಿ ಏನನ್ನೂ ಕೇಳಬೇಡಿ. ಇದು ನಮ್ಮ ಜೀವನದ ಪ್ರಶ್ನೆಯಾಗಿದೆ. ಮೊದಲೇ ನೊಂದಿರುವ ನಮ್ಮನ್ನು ಮತ್ತಷ್ಟು ನೋಯಿಸಬೇಡಿ. ಅಷ್ಟಕ್ಕೂ ನೀವು ಒತ್ತಾಯ ಮಾಡಿದ್ದೇ ಆದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತೆ ಎಂದು ಭೇಟಿ ಮಾಡಲು ಯತ್ನಿಸಿದ ಎಸ್‌ಐಟಿ ಅಧಿಕಾರಿಗಳಿಗೆ ಎಚ್ಚರಿಕೆಯನ್ನು ನೀಡಿದ್ದಾರೆ,ಇದರಿಂದ ಎಸ್‌ಐಟಿ ತನಿಖೆಗೆ ಸ್ವಲ್ಪ ಹಿನ್ನಡೆಯಾಗಿದೆ. ಹೀಗಾಗಿ ಎಸ್​ಐಟಿ ಅಧಿಕಾರಿಗಳು ಸದ್ಯಕ್ಕೆ ದೂರು ಕೊಟ್ಟಿರುವ ಓರ್ವ ಸಂತ್ರಸ್ತೆಯ ಮಾಹಿತಿ ಆಧರಿಸಿ ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular