ಬೆಂಗಳೂರು : ಬೆಂಗಳೂರಿನಲ್ಲಿ ಒಂದು ಹೃದಯವಿದ್ರಾಹಕ ಘಟನೆ ನಡೆದಿದೆ.ಫೆ.20ರ ಮುಂಜಾನೆ ಆಟೋಗಾಗಿ ಕಾಯುತ್ತಿದ್ದ ಅಪರಿಚಿತ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ವರದಿಯಾಗಿದೆ.

ಅತ್ಯಾಚಾರವೆಸಗಿ ಕೊಂದಿದ್ದ ಆರೋಪಿ ಆಟೋ ಚಾಲಕನನ್ನು ಮುಬಾರಕ್ (28) ಎಂದು ತಿಳಿದುಬಂದಿದೆ.
ಫೆ.20ರ ರಂದು ಶಾಂತಿನಗರದ ಜನತಾಕೋ ಆಪರೇಟಿವ್ ಕಟ್ಟಡದ ಬಳಿ ಶವ ಪತ್ತೆಯಾಗಿತ್ತು.ಈ ಬಗ್ಗೆ ಪೊಲೀಸರು ಸಿ.ಸಿ ಟಿವಿ ಮೂಲಕ ಆಟೋ ಚಾಲಕನನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಮಹಿಳೆ ಶವ ಪತ್ತೆಯಾಗಿತ್ತು,ಮೇಲ್ನೋಟಕ್ಕೆ ಮಹಿಳೆ ಕಟ್ಟಡದಿಂದ ಬಿದ್ದು ಮೃತಪಟ್ಟಂತೆ ಕಾಣುತ್ತಿತ್ತು.ಅಪರಿಚಿತ ಮಹಿಳೆಯಾ ಗುರುತು ಇನ್ನು ಪತ್ತೆಯಾಗಿಲ್ಲದ ಕಾರಣ ಮಹಿಳೆಯ ಕುಟುಂಬದ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವೇಳೆ ಅತ್ಯಾಚಾರವೆಸಗಿ ಕೊಂದಿರುವುದು ದೃಢವಾಗಿದೆ.ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆಟೋ ಚಾಲಕ ಮುಬಾರಕ್ ಬಂಧಿಸಿದ್ದು,ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.
ಹತ್ಯೆಗೀಡಾಗಿರುವ ಮಹಿಳೆಯ ಗುರುತನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಸಂಪಂಗಿರಾಮನಗರ ಠಾಣೆ ಪೊಲೀಸರಿಂದ ತನಿಖೆ ಮುಂದುವರೆದಿದೆ.


