ಬೆಂಗಳೂರು : ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು ದುರ್ಬಲ ಕಾನೂನು ವ್ಯವಸ್ಥೆಯೇ ಮುಖ್ಯ ಕಾರಣವೆಂದು ಮಹಿಳೆಯರು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ವೈದ್ಯರನ್ನು ಅತ್ಯಾಚಾರವೆಸಗಿದ ಘಟನೆ ಮಾಸುವ ಮುನ್ನವೇ ರಾಜ್ಯದ ರಾಜ್ಯಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಸಾಮೂಹಿಕ ಅತ್ಯಾಚಾರ ನಡೆದಿದೆ.
ಮಹತ್ಮಾ ಗಾಂಧೀಜಿಯವರ ಮಾತು ಯಾವಾಗ ಓರ್ವ ಯುವತಿ ಮಧ್ಯ ರಾತ್ರಿ 12 ಗಂಟೆಗೆ ರಸ್ತೆ ಮೇಲೆ ಯಾವುದೇ ಭಯವಿಲ್ಲದೆ ಓಡಾಡುತ್ತಾಲೋ ಆಗಲೇ ದೇಶಕ್ಕೆ ಸ್ವಾತಂತ್ರ್ಯ ಬರೋದು ಎಂದು ಹೇಳಿದ್ದರು.ಆದರೆ ಆ ಮಾತು ಇದೀಗ ಮಾತಾಗಿಯೇ ಉಳಿದಿದೆ. ಮಧ್ಯರಾತ್ರಿ ಬೆಂಗಳೂರಿನ ಕೋರಮಂಗಲದ ಪಬ್‌ನಿಂದ ಪಾನಮತ್ತರಾಗಿ ಹೊರ ಬಂದಿದ್ದ ಯುವತಿ ತನ್ನ ದ್ವಿಚಕ್ರ ವಾಹನ ಓಡಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ವಾಹನ ಅಪಘಾತವಾಗಿದ್ದು ಯುವತಿ ವಾಹನ ಬಿಟ್ಟು ಆಟೋದಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ಆಟೋ ಚಾಲಕ, ಯುವತಿಯ ಸ್ಥಿತಿ ಕಂಡು ದುರ್ಬಳಕೆ ಮಾಡಿಕೊಂಡಿದ್ದಾನೆ. ಆಟೋ ಹತ್ತಿದ್ದ ಯುವತಿಯನ್ನು ಹೆಚ್‌ಎಸ್‌ಆರ್ ಲೇಔಟ್‌ಗೆ ಕರೆದುಕೊಂಡು ಹೋಗಿ ಗ್ಯಾಂಗ್ ರೇಪ್ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಸದ್ಯ ಯುವತಿ ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅತ್ತ ರಕ್ಷಣೆ ಬೇಕೆಂದು ಇಡೀ ದೇಶ ಹೋರಾಡುತ್ತಿದೆ, ಆದರೆ ಬೆಂಗಳೂರಿನಲ್ಲಿ ಮಧ್ಯ ರಾತ್ರಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿದ್ದು ಇಡೀ ದೇಶದಲ್ಲಿ ಈಗಲೂ ಹೆಣ್ಮಕ್ಕಳಿಗೆ ಯಾವುದೇ ಸುರಕ್ಷತೆ ಇಲ್ಲದಂತಾಗಿದೆ.