ಬೆಂಗಳೂರು : ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಹಾಡಹಗಲೇ ಎಟಿಎಂ ವಾಹನವನ್ನು ತಡೆದು 7.11 ಕೋಟಿ ಹಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಬುಧವಾರ ಮಧ್ಯಾಹ್ನ ಬೆಂಗಳೂರಿನ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ ನಡೆದಿದೆ.
ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂಗೆ ಹಣ ಹಾಕಲೆಂದು ಜಿಜೆ 10 ಎಚ್‌ಟಿ 9173 ಸಂಖ್ಯೆ ವಾಹನ ಹಣ ತುಂಬಿಕೊAಡು ತೆರಳುತ್ತಿತ್ತು. ಈ ವೇಳೆ ಇನ್ನೋವಾದಲ್ಲಿ ಬಂದ ಆರೇಳು ಜನರ ಗ್ಯಾಂಗ್ ಎಟಿಎಂ ವಾಹನ ತಡೆದು ನಾವು ಆರ್‌ಬಿಐ ಅಧಿಕಾರಿಗಳು ಎಂದು ಹೇಳಿಕೊAಡು ದೋಚಿದ್ದಾರೆ.
ಬುಧವಾರ ಹಾಡಹಗಲೇ ನಗರದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಳ ಸುಳಿವು ಸಿಕ್ಕಿದ್ದು ಶೀಘ್ರವೇ ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಟಿಎಂಗಳಿಗೆ ಹಣ ಹಾಕುವ ಮಾಹಿತಿಯನ್ನು ಆರೋಪಿಗಳಿಗೆ ನೀಡಿದ್ದಾರೆ. ಇದಕ್ಕೆ ಕಾರಣ ಏನು?
ಮಾಹಿತಿ ಕೊಟ್ಟಿದ್ದು ಯಾರು? ಹಣ ಹಾಕುವವರಲ್ಲಿ ಯಾರಾದರೂ ಇದ್ದಾರೋ. ಎಂಬುದರ ಬಗ್ಗೆ ಈಗಷ್ಟೇ ಲೀಡ್ ಸಿಕ್ಕಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದರು. ವಾಹನ ಸಂಖ್ಯೆ ಎಲ್ಲದರ ಮಾಹಿತಿ ಸಿಕ್ಕಿದೆ. ಕೃತ್ಯ ಎಸಗಿದವರು ಇಲ್ಲಿಯವರಾ. ಹೊರ ರಾಜ್ಯದವರಾ. ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಕೆಲವು ಮಾಹಿತಿ ಸಿಕ್ಕಿದೆ. ತನಿಖೆಗೆ ಅಡ್ಡಿಯಾಗುವುದರಿಂದ ಎಲ್ಲ ಮಾಹಿತಿಯನ್ನು ಹಂಚಿಕೊಳ್ಳಲಾಗುವುದಿಲ್ಲ. ಖಂಡಿತವಾಗಿ ಆರೋಪಿಗಳನ್ನು ಅರೆಸ್ಟ್ ಮಾಡುತ್ತೇವೆ ಎಂದು ತಿಳಿಸಿದರು.
ದರೋಡೆಗೆ ಹಲವು ದಿನಗಳಿಂದಲೇ ಸಂಚು ರೂಪಿಸಿದ್ದ ದರೋಡೆಕೋರರ ಗ್ಯಾಂಗ್ ಬುಧವಾರ ಬೆಳಗ್ಗೆ ಎಟಿಎಂಗಳಿಗೆ ಹಣ ಸಾಗಿಸುವ ವ್ಯಾನ್ ಹಿಂಬಾಲಿಸಿದೆ. ಆ ಬಳಿಕ ವಾಹನವನ್ನು ಅಡ್ಡಗಟ್ಟಿ ಸಿಬ್ಬಂದಿಯನ್ನು ಬೆದರಿಸಿ ಕೋಟ್ಯಂತರ ರೂಪಾಯಿ ತುಂಬಿಕೊAಡು ಇನ್ನೋವಾ ಕಾರಿನಲ್ಲಿ ಪರಾರಿಯಾಗಿದ್ದಾರೆ. ಪ್ರಾಥಮಿಕ ತನಿಖೆ ನಡೆಸಲಾಗುತ್ತಿದ್ದು ಮೇಲ್ನೋಟಕ್ಕೆ ಸಿಎಂಎಸ್, ಚಾಲಕ, ಸಿಬ್ಬಂದಿ ಮೇಲೆ ಅನುಮಾನ ಮೂಡಿದೆ. ಈ ಹಿನ್ನೆಲೆ ಪೊಲೀಸರು ಚಾಲಕನ ವಿಚಾರಣೆ ನಡೆಸುತ್ತಿದ್ದಾರೆ.
ತಕ್ಷಣ ಮಾಹಿತಿ ನೀಡಿದ್ದರೆ ನಮ್ಮ ಪೊಲೀಸರು ದರೋಡೆಕೋರರನ್ನು ಬಂಧಿಸುವುದಕ್ಕೆ ಸಹಾಯವಾಗುತ್ತಿತ್ತು. ನಗರಾದ್ಯಂತ ನಾಕಾಬಂದಿ ಮಾಡಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದೇವೆ. ಆದರೆ ಈವರೆಗೂ ದರೋಡೆಕೋರರು ಸಿಕ್ಕಿಲ್ಲ. ಪಶ್ಚಿಮ ವಲಯದ ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 2-3 ತಂಡಗಳನ್ನು ರಚಿಸಿದ್ದೇವೆ ಎಂದು ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.


