ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.15 ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಯೋಜನಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಅಸಂಖ್ಯಾತ ಜನರ ಹೋರಾಟ, ತ್ಯಾಗ, ಬಲಿದಾನದಿಂದ ಪಡೆದುಕೊಂಡ
ಸ್ವಾತಂತ್ರ್ಯಕ್ಕೆ ಕಾರಣರಾದ ಎಲ್ಲರನ್ನೂ ಸದಾ ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಇಂದಿನ ನಮ್ಮ ಸಂಭ್ರಮಕ್ಕೆ ತಳಪಾಯವಾಗಿ, ಮೆಟ್ಟಿಲುಗಳಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದ ಎಲ್ಲರನ್ನು ಮರೆಯದೆ ಸದಾ ಸ್ಮರಿಸುತ್ತಾ ಭವ್ಯ ಭಾರತವನ್ನು ಕಟ್ಟುವಲ್ಲಿ ನಮ್ಮ ಜವಾಬ್ದಾರಿಯುತ ಪಾತ್ರವನ್ನು ನಿರ್ವಹಿಸಬೇಕಿದೆ ಎಂದಿದ್ದಾರೆ.
ದೇಶಾದ್ಯAತ ಭಾರತದ ಸ್ವಾತಂತ್ರ್ಯದ 75 ರ ಅಮೃತ ಮಹೋತ್ಸವದ ಸಂಭ್ರಮವನ್ನು ವೈವಿಧ್ಯಮಯವಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು, ಮಕ್ಕಳು, ಶಿಕ್ಷಣ ಇಲಾಖೆಯ ಎಲ್ಲಾ ಸ್ತರದ ಸಿಬ್ಬಂದಿಗಳು ಹಾಗೂ ಅವರ ಕುಟುಂಬ ವರ್ಗದವರು ಸೇರಿ ಸ್ವತಃ ತಾವೇ ಕ್ರಿಯಾಶೀಲರಾಗಿ ಭಾಗವಹಿಸುವಂತೆ ಪ್ರೇರೇಪಿಸುವುದು. ಹರ್ ಘರ್ ತಿರಂಗ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದು ಎಂಬುದಾಗಿ ಸೂಚಿಸಿದ್ದಾರೆ