Thursday, July 23, 2026
Homeಕ್ರೈಂಬೆಂಗಳೂರು ; ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು ಎಂದು ಹೇಳಿದ ಬ್ಲ್ಯಾಕ್‌ಮೇಲ್ ನಿರೂಪಕಿ ದಿವ್ಯ...

ಬೆಂಗಳೂರು ; ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು ಎಂದು ಹೇಳಿದ ಬ್ಲ್ಯಾಕ್‌ಮೇಲ್ ನಿರೂಪಕಿ ದಿವ್ಯ ವಸಂತ ಬಂಧನ.

ಬೆಂಗಳೂರು ; ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ದಿವ್ಯ ವಸಂತಾ ಕೊನೆಗೂ ತಮಿಳುನಾಡಿನಿಂದ ಕೇರಳದಲ್ಲಿ ತಲೆ ಮರೆಸಿಕೊಂಡಿದ್ದಳು. ಸದ್ಯ ಕೇರಳದಿಂದ ಬಂಧಿಸಿ ಕರೆತಂದಿರುವ ಜೀವನ್ ಭೀಮಾನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರು. ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ರಾಜ್ ನ್ಯೂಸ್‌ ಕಾರ್ಯನಿರ್ವಾಹಕ ರಾಜಾನುಕುಂಟೆ ವೆಂಕಟೇಶ್, ದಿವ್ಯ ತಮ್ಮ ಸಂದೇಶ್ ಸೇರಿ ಮೂವರನ್ನು ಈಗಾಗಲೇ ಬಂಧಿಸಿದ್ದಾರೆ.

ಇಂದಿರಾ ನಗರದ 80 ಅಡಿ ರಸ್ತೆಯ ಮೈಕಲ್ ಪಾಳ್ಯ ಸಮೀಪದ ಸಹರಾ ಇಂಟರ್ ನ್ಯಾಷನಲ್ ಸ್ಪಾದ ವ್ಯವಸ್ಥಾಪಕ ಮಹೇಶ್ ಶೆಟ್ಟಿಗೆ ಬೆದರಿಸಿ 1 ಲಕ್ಷ ರು ಸುಲಿಗೆ ಮಾಡಿದ್ದು, ಈ ಬಗ್ಗೆ ವ್ಯವಸ್ಥಾಪಕ ನೀಡಿದ ದೂರಿನ ಮೇರೆಗೆ ರಾಜ್ ನ್ಯೂಸ್‌ ಸಿಇಒ ವೆಂಕಟೇಶ್ ಹಾಗೂ ಇತರರ ವಿರುದ್ಧ ಇಂದಿರಾನಗರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಸುಲಿಗೆ ಕೃತ್ಯಗಳಿಗೆ ವಾಟ್ಸ್ ಆಪ್‌ನಲ್ಲಿ ‘ಸೈ ರಿಸರ್ಚ್ ಟೀಂ’ ಹೆಸರಿನ ಗ್ರೂಪ್ ಅನ್ನು ವೆಂಕಟೇಶ್‌ ಹಾಗೂ ದಿವ್ಯಾ ಮಾಡಿಕೊಂಡಿದ್ದರು. ಈ ಗ್ರೂಪ್‌ನಲ್ಲಿ ತಮ್ಮ ಕಾರ್ಯಸೂಚಿಗಳ ಬಗ್ಗೆ ಆರೋಪಿಗಳು ಚರ್ಚಿಸುತ್ತಿದ್ದರು ಕೊನೆಗೂ ಅರೋಪಿಯನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular