ಬೆಂಗಳೂರು : ದೇಶದಲ್ಲಿ ಮತ್ತೊಮ್ಮೆ ಮೋದಿ ಸರಕಾರ ಅಧಿಕಾರಕ್ಕೆ ಬರುತ್ತದೆಂದು ಚುನಾವಣಾ ಸಮೀಕ್ಷೆ ಹೊರಬಿದ್ದಿದ್ದು ಕಾಂಗ್ರೆಸ್ ನಾಯಕರಿಗೆ ದಿಗಿಲುಬಡಿದಂತಾಗಿದೆ.ಈಗಾಗಲೇ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಹಲವಾರು ಸಂಸ್ಥೆಗಳ ಎಕ್ಸಿಟ್ ಪೋಲ್ ಫಲಿತಾಂಶ ಹೊರಬಂದಿದೆ. ಈ ವಿಷಯವಾಗಿ ಮಾತನಾಡಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಎಕ್ಸಿಟ್ ಪೋಲ್‌ಗೆ ವಿರುದ್ಧವಾದ ಫಲಿತಾಂಶ ಬರಲಿದೆ ಎಂದಿದ್ದಾರೆ. ಫಲಿತಾಂಶ ಬರುವವರೆಗೂ ಕಾಯೋಣ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಎಕ್ಸಿಟ್ ಪೋಲ್‌ಗೆ ವಿರುದ್ಧವಾಗಿ ನಮ್ಮ ಪರ ಫಲಿತಾಂಶ ಬರಲಿದೆ. ಐಎನ್‌ಡಿಐಎ ಮೈತ್ರಿ ಕೂಟಕ್ಕೆ 295 ಸ್ಥಾನ ಬರಲಿದೆ ಎಂದು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಎಕ್ಸಿಟ್ ಪೋಲ್‌ಗಳನ್ನ ಮೋದಿಎಕ್ಸಿಟ್ ಪೋಲ್ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ಎಲ್ಲ ಎಕ್ಸಿಟ್ ಪೋಲ್ ಗಳು ಬಿಜೆಪಿ ಸರಕಾರ ಅಧಿಕಾರಕ್ಕೆ ಬರುತ್ತದೆಂದು ಹೇಳುತ್ತಿದ್ದು ಕೇಂದ್ರ ಕಾಂಗ್ರೆಸ್ ನಾಯಕರು ಕಕ್ಕಾಬಿಕ್ಕಿಯಾಗಿದ್ದಾರೆ.
ಎಕ್ಸಿಟ್ ಪೋಲ್ ಗಳ ಬಗ್ಗೆ ಮಾತಾಡಿದ ಮುಖ್ಯಮಂತ್ರಿಯವರು, ಅವುಗಳ ಮೇಲೆ ನಂಬಿಕೆ ಇಲ್ಲ, ಅವು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಾಧ್ಯಮಗಳು ಮಾಡಿರುವ ಸಮೀಕ್ಷೆಗಳು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕನಿಷ್ಠ 15ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆ-2024ರ ಎಕ್ಸಿಟ್ ಪೋಲ್ ನ್ನು ತಿರಸ್ಕರಿಸಿದ್ದಾರೆ, ಇದು ಫ್ಯಾಂಟಸಿ ಸಮೀಕ್ಷೆ ಮತ್ತು ಮೋದಿ ಸಮೀಕ್ಷೆ ಎಂದು ಟೀಕಿಸಿದ್ದಾರೆ. ಇದು ಎಕ್ಸಿಟ್ ಪೋಲ್ ಅಲ್ಲ, ಇದು ಮೋದಿ ಮೀಡಿಯಾ ಸಮೀಕ್ಷೆ. ಇದು ಅವರ ಫ್ಯಾಂಟಸಿ ಸಮೀಕ್ಷೆ ಎಂದು ವ್ಯಾಖ್ಯಾನಿಸಿದ್ದಾರೆ.
ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಐತಿಹಾಸಿಕ ಗೆಲುವು ಸಾಧಿಸಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ. ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿತ್ತು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನೀವು ಸಿದ್ದು ಮೂಸ್ ವಾಲಾ ಅವರ ಹಾಡು 295? 295 ನ್ನು ಕೇಳಿದ್ದೀರಾ ಎಂದು ಪ್ರಶ್ನಿಸಿದರು.
ಆಕ್ಸಿಸ್ ಮೈ ಇಂಡಿಯಾದ ಎಕ್ಸಿಟ್ ಪೋಲ್‌ಗಳು ಎನ್‌ಡಿಎಗೆ 361 ರಿಂದ 401 ಸೀಟುಗಳ ಅಂತರದಲ್ಲಿ ಭಾರಿ ಗೆಲುವು ಸಾಧಿಸಲಿದೆ ಎಂದು ಅಂದಾಜಿಸಿದೆ. ಮತ್ತೊಂದೆಡೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಬ್ಲಾಕ್ ಕೇವಲ 131-166 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ, ಕಾಂಗ್ರೆಸ್ ಪಕ್ಷವು ಕರ್ನಾಟಕ, ತೆಲಂಗಾಣ ಮತ್ತು ರಾಜಸ್ಥಾನದಲ್ಲಿ ಹೆಚ್ಚಿನ ಸಂಖ್ಯೆಯನ್ನು ಈ ಬಾರಿ ಗೆಲ್ಲಲಿದೆ ಎಂದು ಹೇಳಿದೆ.
ಜೂನ್ 4 ರಂದು ನಡೆಯಲಿರುವ ಮತ ಎಣಿಕೆಗೆ ಮುನ್ನ ವಿರೋಧ ಪಕ್ಷಗಳ ಸಿದ್ಧತೆಗಳನ್ನು ಪರಿಶೀಲಿಸಲು ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟ ನಾಯಕರು ನಿನ್ನೆ ಸಭೆ ನಡೆಸಿದ್ದರು. ಅದರಲ್ಲಿ ಅವರು 295 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದ್ದೇವೆ ಎಂದು ಹೇಳಿಕೊಂಡಿದ್ದರು.
ಮತದಾನೋತ್ತರ ಸಮೀಕ್ಷೆ ಬಗ್ಗೆ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, ಇಂಡಿಯಾ ಬಣವು 295 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತದೆ. ಜನರು ನಮಗೆ ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರ ನೀಡಿರುವ ಸಮೀಕ್ಷೆ ಪಕ್ಷಪಾತದ ಮಾಧ್ಯಮಗಳು ನೀಡಿರುವ ಸಮೀಕ್ಷೆಯಷ್ಟೆ. ಆದರೆ ವಾಸ್ತವಾಂಶ ಬೇರೆಯೇ ಇದೆ ಎಂದು ಹೇಳಿದ್ದಾರೆ.