Saturday, November 23, 2024
Flats for sale
Homeರಾಜಕೀಯಬೆಂಗಳೂರು : ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ,ಆಸ್ಪತ್ರೆಗೆ ದಾಖಲು,ಆತಂಕಪಡುವ ಅಗತ್ಯ ಇಲ್ಲ ಎಂದ ಅಪೋಲೊ ವೈದ್ಯರು...

ಬೆಂಗಳೂರು : ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ,ಆಸ್ಪತ್ರೆಗೆ ದಾಖಲು,ಆತಂಕಪಡುವ ಅಗತ್ಯ ಇಲ್ಲ ಎಂದ ಅಪೋಲೊ ವೈದ್ಯರು ..!

ಬೆಂಗಳೂರು : ಇಂದು ಹಲವು ಸಭೆ,ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಾಲ್ಮೀಕಿ, ಮುಡಾ ಹಗರಣ ಖಂಡಿಸಿದ ಬಿಜೆಪಿ ಹಾಗೂ ಜೆಡಿಎಸ್​ನಿಂದ ಪಾದಯಾತ್ರೆಗೆ ತೀರ್ಮಾನ ಮಾಡಲಾಗಿತ್ತು .ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತಾಡುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತ ಕಾಣಿಸಿಕೊಂಡಿದೆ. ಆ ಕೂಡಲೇ ಹೆಚ್​.ಡಿ.ಕುಮಾರಸ್ವಾಮಿ ಅವರು ಕರ್ಚಿಫ್​ನಿಂದ ಒರೆಸಿಕೊಂಡಿದ್ದಾರೆ. ಆದರೆ ಅಷ್ಟಕ್ಕೆ ನಿಲ್ಲದೆ ಅಧಿಕವಾಗಿ ರಕ್ತಸ್ರಾವ ಬಂದಿದೆ. ರಕ್ತಸ್ರಾವ ಹೆಚ್ಚಾದಂತೆ ಖಾಸಗಿ ಹೋಟೆಲ್​ನಿಂದ ಕುಮಾರಸ್ವಾಮಿ ಅವರನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಅವರನ್ನು ಕಳುಹಿಸಿಕೊಡಲಾಗಿದೆ.

ಮೂಗಿನಿಂದ ರಕ್ತಸ್ರಾವ ಹೆಚ್ಚಾದ ಹಿನ್ನೆಲೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು. ಮೂಗಿನಿಂದ ರಕ್ತಸ್ರಾವ ಹಿನ್ನೆಲೆಯಲ್ಲಿ ಬಿಳಿ ಶರ್ಟ್ ರಕ್ತಮಯವಾಗಿದೆ.
ಈ ಬಗ್ಗೆ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರಿಗೆ ಎರಡನೇ ಬಾರಿ ಈ ರೀತಿ ಆಗುತ್ತಿದೆ. ರಕ್ತ ಹೆಪ್ಪುಗಟ್ಟಬಾರದು ಎಂದು ಥಿನ್ನರ್‌ ತೆಗೆದುಕೊಳ್ಳುತ್ತಿದ್ದರು. ಅವರಿಗೆ ಬಿಪಿ ನಾರ್ಮಲ್‌ ಇದೆ, ನಿತ್ಯ ಶುಗರ್‌ ಲೆವೆಲ್‌ ಚೆಕ್‌ ಮಾಡಿಕೊಳ್ಳುತ್ತಿದ್ದರು. ಪ್ರವಾಸ ಹೆಚ್ಚಾಗಿ ಓವರ್‌ ಹೀಟ್‌ನಿಂದ ರಕ್ತಸ್ರಾವ ಆಗಿರಬಹುದು ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿಯವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಎನ್​ಟಿ ವಿಭಾಗದ ಮುಖ್ಯಸ್ಥ ಡಾ.ಯತೀಶ್ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ರಕ್ತ ಸೋರಿಕೆ ನಿಂತಿದ್ದು, ಆತಂಕಪಡುವ ಅಗತ್ಯ ಇಲ್ಲ. ಕುಮಾರಸ್ವಾಮಿ ಆರೋಗ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಅಪೋಲೊ ವೈದ್ಯರು ಹೇಳಿದ್ದಾರೆ. ಕುಮಾರಸ್ವಾಮಿ ಆರೋಗ್ಯಕ್ಕೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ಆರೋಗ್ಯ ಕಡೆ ಹೆಚ್ಚು ಒತ್ತು ಕೊಡಬೇಕು. ಸ್ಟ್ರೋಕ್​ ಆಗಿದ್ದ ಹಿನ್ನೆಲೆ ರಕ್ತಹೆಪ್ಪುಗಟ್ಟದಂತೆ ಮಾತ್ರೆ ತೆಗೆದುಕೊಳುತ್ತಿದ್ದಾರೆ. ಹಾಗಾಗಿ ಮೂಗಿನಲ್ಲಿ ರಕ್ತಸ್ರಾವವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular