Saturday, March 14, 2026
Flats for sale
Homeರಾಜ್ಯಬೆಂಗಳೂರು ; SSLC ಪರೀಕ್ಷೆಯ ಫಲಿತಾಂಶ ಮೇ 9 ಅಥವಾ 10ರಂದು ಪ್ರಕಟವಾಗುವ ನಿರೀಕ್ಷೆ!

ಬೆಂಗಳೂರು ; SSLC ಪರೀಕ್ಷೆಯ ಫಲಿತಾಂಶ ಮೇ 9 ಅಥವಾ 10ರಂದು ಪ್ರಕಟವಾಗುವ ನಿರೀಕ್ಷೆ!

ಬೆಂಗಳೂರು ; ಮಂಗಳವಾರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುವ ಹಿನ್ನೆಲೆ ಫಲಿತಾಂಶ ವಿಳಂಬವಾಗುತ್ತಿರುವುದು ಬೆಳಕಿಗೆ ಬಂದಿದೆ. ಚುನಾವಣಾ ಕಾರ್ಯನಿಮಿತ್ತ ಅಧಿಕಾರಿಗಳು ಕೆಲಸಕಾರ್ಯದಲ್ಲಿ ತುಂಬಾ ಬ್ಯುಸಿ ಆಗಿರುವುದರಿಂದ ಇದೇ ವಾರ ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. ಎಸ್​​ಎಸ್​​ಎಲ್​ಸಿ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು ನೋಂದಾಯಿಸಿಕೊಂಡಿದ್ದರು.

ಫಲಿತಾಂಶದ ದಿನಾಂಕವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಅಧಿಕೃತವಾಗಿ ಘೋಷಣೆ ಮಾಡಿಲ್ಲವೆಂದು ತಿಳಿದುಬಂದಿದೆ.ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಸ್‌ಎಸ್‌ಎಲ್‌ಸಿ ಫಲಿತಾಂಶದ ಪ್ರಕಟಕ್ಕೆ ಪೋಷಕರು ಕಾಯುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ .ಸಿಬಿಎಸ್‌ಇ 10ನೇ ತರಗತಿಯ ಫಲಿತಾಂಶದ ಹೆಸರಿನಲ್ಲಿ ನಕಲಿ ಸಂದೇಶ ಭಾನುವಾರ ಹರಿದಾಡಿತ್ತು. ಸಾಮಾಜಿಕ ಮಾಧ್ಯಮದಲ್ಲಿ ಫಾರ್ವರ್ಡ್​ ಆದ ಇಂತಹ ಅಸಂಬದ್ಧ ಸಂದೇಶಗಳಲ್ಲಿ ಬಗ್ಗೆ ವಿದ್ಯಾರ್ಥಿಗಳು ಎಚ್ಚರದಿಂದ ಇರಬೇಕು. ಇಲಾಖೆಯ ಅಧಿಕೃತ ವೆಬ್​​ಸೈಟ್​​ನಲ್ಲಿ ನೀಡಿದರೆ ಮಾತ್ರವೇ ಪರಿಗಣಿಸಬೇಕು ಎಂದು ಇಲಾಖೆ ಸಲಹೆ ನೀಡಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಶಿಕ್ಷಣ ಇಲಾಖೆಯ ವೆಬ್‌ಸೈಟ್​​​ನಲ್ಲಿ ಕೂಡ ಪ್ರಕಟವಾಗಲಿದೆ. ಜತೆಗೆ ಆಯಾ ಶಾಲೆಗಳಲ್ಲಿಯೂ ಪ್ರಕಟಿಸಲಾಗುತ್ತದೆ.

ಫಲಿತಾಂಶ ವಿವರ ಅಧಿಕೃತ ವೆಬ್​ಸೈಟ್ karresults.nic.in ನಲ್ಲಿ ಲಭ್ಯ.

ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ

ಹೊಸ ಲಾಗಿನ್ ಪುಟವು ತೆರೆಯುತ್ತದೆ

ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ

ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್​ಲೋಡ್ ಮಾಡಿ ವೀಕ್ಷಿಸಬಹುದು.

RELATED ARTICLES

LEAVE A REPLY

Please enter your comment!
Please enter your name here

Most Popular