Thursday, November 21, 2024
Flats for sale
Homeರಾಜಕೀಯಬೆಂಗಳೂರು : ಒಂದೇ ಕಾರಿನಲ್ಲಿ ಡಿಕೆ. ಶಿವಕುಮಾರ್ ಜೊತೆ ತೆರಳಿ ಕಾಂಗ್ರೆಸ್ ಸೇರಿದ ಸಿಪಿ ಯೋಗೇಶ್ವರ್.

ಬೆಂಗಳೂರು : ಒಂದೇ ಕಾರಿನಲ್ಲಿ ಡಿಕೆ. ಶಿವಕುಮಾರ್ ಜೊತೆ ತೆರಳಿ ಕಾಂಗ್ರೆಸ್ ಸೇರಿದ ಸಿಪಿ ಯೋಗೇಶ್ವರ್.

ಬೆಂಗಳೂರು : ರಾಜ್ಯ ಬಿಜೆಪಿಗೆ ಬೆಳ್ಳಂಬೆಳಗ್ಗೆ ಸಿಪಿ ಯೋಗೇಶ್ವರ್ ಶಾಕ್ ನೀಡಿದ್ದು ಚನ್ನಪಟ್ಟಣದಲ್ಲಿ ಆಪರೇಷನ್‌ ಸಕ್ಸಸ್‌ ಆಗಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆಂದು ಘೋಷಿಸಿದ್ದರು. ಆದರೂ ಸಹ ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್​ಡಿಎ ಟಿಕೆಟ್​ ಸಿಗಬಹುದು ಎಂದು ಕಾದು ಕುಳಿತ್ತಿದ್ದರು. ಆದ್ರೆ, ಇದೀಗ ಡಿಕೆ ಶಿವಕುಮಾರ್​, ಯೋಗೇಶ್ವರ್​ ಅವರನ್ನು ಬಲೆಗೆ ಬೀಳಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು. ಬಳಿಕ ಇಬ್ಬರು ನಾಯಕರು ಒಂದೇ ಕಾರಿನಲ್ಲಿ ತೆರಳಿ ಸಿಎಂ ಸಿದ್ದರಾಯ್ಯನವರನ್ನು ಭೇಟಿಯಾಗಿದ್ದಾರೆ. ಈ ಮೂಲಕ ಯೋಗೇಶ್ವರ್​ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು, ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಮಂಗಳವಾರ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ ಯೋಗೀಶ್ವರ್ ಚರ್ಚಿಸಿದ್ದರು. ಮಧ್ಯರಾತ್ರಿ ಖಾಸಗಿ ಹೊಟೇಲಿನಲ್ಲಿ ಡಿಕೆಶಿಯನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭೇಟಿ ವೇಳೆ ಇಂದು ಬೆಳಗ್ಗೆ ಸಿಎಂ ನಿವಾಸದಲ್ಲಿ ಪಕ್ಷ ಸೇರ್ಪಡೆಗೆ ಸಿಪಿವೈಗೆ ಡಿಕೆಶಿ ತಿಳಿಸಿದ್ದರು. ಅದರಂತೆ ಇಂದು ಬೆಳಗ್ಗೆಯೇ ಡಿಕೆಶಿ ನಿವಾಸಕ್ಕೆ ಯೋಗೀಶ್ವರ್ ತೆರಳಿ ಜೊತೆಯಾಗಿ ಸಿಎಂ ನಿವಾಸಕ್ಕೆ ಆಗಮಿಸಿದ್ದರು.

ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ನಿನ್ನೆ ರಾತ್ರಿಯೇ ಸಿಎಂಗೆ ಸುಳಿವು ಸಿಕ್ಕಿದೆ. ಹೀಗಾಗಿ ಅವರು ವಯನಾಡಿಗೆ ಹೋಗುವುದನ್ನು ಬಿಟ್ಟು ನೇರವಾಗಿ ಮೈಸೂರಿನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಇದೀಗ ಅಂದುಕೊಂಡತೆ ಯೋಗೇಶ್ವರ್ ಕಾಂಗ್ರೆಸ್ ಮನೆ ಬಾಗಿಲಿಗೆ ಬಂದು ನಿಂತಿದ್ದು, ಯಾವುದೇ ಕ್ಷಣದಲ್ಲೂ ಯೋಗೇಶ್ವರ್​ ಅವರನ್ನು ಕಾಂಗ್ರೆಸ್​ ಮನೆಯೊಳಗೆ ಅಧಿಕೃತವಾಗಿ ಬರಮಾಡಿಕೊಳ್ಳಬಹುದು.​

1999ರಲ್ಲಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ಯೋಗೇಶ್ವರ್‌ 2004 ಮತ್ತು 2008 ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದರು. 2013 ರಲ್ಲಿ ಸಮಾಜವಾದಿ ಪಕ್ಷದಿಂದ ಆಯ್ಕೆಯಾಗಿದ್ದ ಯೋಗೇಶ್ವರ್‌ 2018 ಮತ್ತು 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ ವಿರುದ್ಧ ಸೋತಿದ್ದರು. 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ 96,592 ಮತಗಳನ್ನು ಪಡೆದರೆ ಯೋಗೇಶ್ವರ್‌ 80,677 ಮತಗಳನ್ನು ಪಡೆದಿದ್ದರು.

2018ರ ಚುನಾವಣೆಯಲ್ಲಿ ಕುಮಾರಸ್ವಾಮಿ 21,53 ಮತಗಳ ಅಂತರದಿಂದ ಜಯಗಳಿಸಿದ್ದರೆ 2023 ರಲ್ಲಿ 15,915 ಮತಗಳ ಅಂತರದಿಂದ ಗೆದ್ದಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular