Friday, November 22, 2024
Flats for sale
Homeರಾಜ್ಯಬೆಂಗಳೂರು : ಕಬಾಯ್ ಆಯ್ತು ಈಗ ಕೇಕ್, ಬೇಕರಿ ತಿನಿಸುಗಳ ಸರದಿ,ಕೃತಕ ಬಣ್ಣ ಬಳಸುವ ಕೇಕ್...

ಬೆಂಗಳೂರು : ಕಬಾಯ್ ಆಯ್ತು ಈಗ ಕೇಕ್, ಬೇಕರಿ ತಿನಿಸುಗಳ ಸರದಿ,ಕೃತಕ ಬಣ್ಣ ಬಳಸುವ ಕೇಕ್ ನಿಷೇಧಿಸಲು ಸರಕಾರ ಸಿದ್ಧತೆ..!

ಬೆಂಗಳೂರು : ಗೋಬಿ ಮಂಚೂರಿ ಕಾಟನ್‌ ಕ್ಯಾಂಡಿ,ಕಬಾಬ್ ಆಯ್ತು. ಈಗ ಕೇಕ್ ಸರದಿ ಕೇಕ್ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್‌ ಕೊಟ್ಟಿದೆ. ಕ್ಯಾನ್ಸರ್‌ ಕಾರಕ ಅಂಶ ಇರುವ ಕಾರಣ ಗೋಬಿ ಮತ್ತು ಕ್ಯಾಂಡಿ ಕಾಟನ್‌ಗೆ ಕೃತಕ ಬಣ್ಣ ಬಳಕೆಗೆ ನಿಷೇಧ ಹೇರಿತ್ತು. ಅದರ ಬೆನ್ನಲ್ಲೇ ಚಿಕನ್‌ ಕಬಾಬ್‌, ಫಿಶ್‌ ಕಬಾಬ್‌ ಹಾಗೂ ಇತರೆ ಖಾದ್ಯಗಳ ತಯಾರಿಕೆಗೆ ಕೃತಕ ಬಣ್ಣ ಬಳಸುವುದಕ್ಕೆ ಸರ್ಕಾರ ನಿಷೇಧ ವಿಧಿಸಿ ಆದೇಶ ಹೊರಡಿಸಿತ್ತು ಆದರೆ ಇದೀಗ ಬೇಕರಿಯ ತಿನಿಸುಗಳ ಮೇಲೆ ನಿರ್ಬಂಧ ತರಲು ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.‌ ಇದಕ್ಕೆ ಪೂರಕವಾಗಿ ಮೊದಲಿಗೆ ಸಾಮಾನ್ಯವಾಗಿ ಜನರು ಹೆಚ್ಚು ಸೇವನೆ ಮಾಡುವ ಕೇಕ್‌ಗಳ ಮೇಲೆ ನಿಗಾ ವಹಿಸಲಾಗುತ್ತಿದೆ.‌ ಕೇಕ್‌ಗೆ ಬಳಸುವ ಮೈದಾಹಿಟ್ಟು, ಕೋಕೋ ಪೌಡರ್, ಕ್ರೀಮ್‌ಗಳಿಗೆ ಬಳಸುವ ಪದಾರ್ಥಗಳು, ಫ್ಲೇವರ್‌ಗಳು ಹಾಗೂ ಬಣ್ಣ ಬಣ್ಣವಾಗಿರಲು ಬಳಸುವ ಕಲರ್‌ಗಳನ್ನ ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಪೈನಾಪಲ್, ರೆಡ್ ವೆಲ್ವೆಟ್, ಚಾಕೋಲೇಟ್ ಸೇರಿದಂತೆ ವಿವಿಧ ಫ್ಲೇವರ್‌ಗಳನ್ನ ಜನರು ಇಷ್ಟ ಪಡುವುದರಿಂದ ಅವುಗಳ ತಯಾರಿಕೆ ಅಥವಾ ಅದಕ್ಕೆ ಹಾಕುವ ಪದಾರ್ಥಗಳು ಜನರು ಆರೋಗ್ಯಕ್ಕೆ ಪೂರಕವಾ ಅಥವಾ ಮಾರಕವಾ ಎಂಬುದನ್ನು ತಿಳಿಯಲು ಮುಂದಾಗಿದೆ.

ಕಣ್ಣಿಗೆ ಆಕರ್ಷಣೆ, ನಾಲಿಗೆಗೆ ರುಚಿ ಸಿಕ್ಕರೆ ಮನುಷ್ಯ ತನ್ನ ಮೇಲಿನ ನಿಯಂತ್ರಣವನ್ನೇ ಕಳೆದುಕೊಳ್ಳುತ್ತಾನೆ. ತಿನಿಸುಗಳು ಮೊದಲು ಕಣ್ಣಿಗೆ ಆಕರ್ಷಣೀಯವಾಗಿ ಕಾಣುತ್ತವೆ. ಆಮೇಲೆ ರುಚಿ ಆಸ್ವಾಧಿಸಲು ಸೆಳೆಯುತ್ತವೆ. ರುಚಿಕರ ತಿನಿಸನ್ನು ನಾಲಿಗೆಗೆ ಇಟ್ಟರೆ ಸಾಕು, ಆಹಾ.. ಇನ್ನೂ ಬೇಕು ಎನಿಸುತ್ತದೆ. ಆದರೆ ಆರೋಗ್ಯಕ್ಕೆ? ರುಚಿಯ ಮುಂದೆ ಕೆಲವೊಮ್ಮೆ ಆರೋಗ್ಯ ಕಾಳಜಿಯೂ ಗೌಣವಾಗಿಬಿಡುತ್ತದೆ. ಈ ಬಚಿಕನ್ , ಫಿಶ್ ಕಬಾಬ್‌ ಹಾಗೂ ಇತರೆ ಖಾದ್ಯಗಳ ತಯಾರಿಕೆಗೆ ಕೃತಕ ಬಣ್ಣಗಳನ್ನು ಬಳಸುವುದಕ್ಕೆ ಕರ್ನಾಟಕ ಸರ್ಕಾರ ಸಂಪೂರ್ಣ ನಿಷೇಧ ವಿಧಿಸಿದೆ. ಚಿಕನ್ ಮತ್ತು ಫಿಶ್ ಕಬಾಬ್ ತಯಾರಿಕೆಯಲ್ಲಿ ಬಳಸುವ ಕೃತಕ ಬಣ್ಣಗಳ ಮಾದರಿಗಳನ್ನು ತಪಾಸಣೆಗೆ ಒಳಪಡಿಸಿದಾಗ ಕಳಪೆ ಗುಣಮಟ್ಟದ್ದು ಎಂದು ತಿಳಿದುಬಂದಿದೆ. ಕೃತಕ ಬಣ್ಣಗಳನ್ನು ಬಳಸಿದ ಖಾದ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಆಯುಕ್ತರು ತನಿಖೆ ನಡೆಸಿ ಕ್ರಮಕೈಗೊಳ್ಳಲಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿದೆ. ರಾಜ್ಯಾದ್ಯಂತ ಕಬಾಬ್ ಮತ್ತು ತಿನಿಸುಗಳಲ್ಲಿ ಕೃತಕ ಬಣ್ಣಗಳನ್ನು ಬಳಸುತ್ತಿರುವ ಕುರಿತು ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗೆ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ.ಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಬಹುಪಾಲು ಮಂದಿ ಡೋಂಟ್ ಕೇರ್ ಎನ್ನುತ್ತಾರೆ. ಆದರೆ ಸರ್ಕಾರ ಬಿಡಬೇಕಲ್ಲ, ತನ್ನ ಸಮಾಜದ ಪ್ರತಿಯೊಬ್ಬ ನಾಗರಿಕರ ಹಿತಕ್ಕಾಗಿ ಕೆಲವೊಂದು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುತ್ತದೆ. ಈಗಲೂ ಅಂತಹದ್ದೊಂದು ಘೋಷಣೆಯಾಗಿದೆ.

ಚಿಕನ್ ಫಿಶ್ ಕಬಾಬ್‌ ಹಾಗೂ ಇತರೆ ಖಾದ್ಯಗಳ ತಯಾರಿಕೆಗೆ ಕೃತಕ ಬಣ್ಣಗಳನ್ನು ಬಳಸುವುದಕ್ಕೆ ಕರ್ನಾಟಕ ಸರ್ಕಾರ ಸಂಪೂರ್ಣ ನಿಷೇಧ ವಿಧಿಸಿದೆ. ಚಿಕನ್ ಮತ್ತು ಫಿಶ್ ಕಬಾಬ್ ತಯಾರಿಕೆಯಲ್ಲಿ ಬಳಸುವ ಕೃತಕ ಬಣ್ಣಗಳ ಮಾದರಿಗಳನ್ನು ತಪಾಸಣೆಗೆ ಒಳಪಡಿಸಿದಾಗ ಕಳಪೆ ಗುಣಮಟ್ಟದ್ದು ಎಂದು ತಿಳಿದುಬಂದಿದೆ. ಕೃತಕ ಬಣ್ಣಗಳನ್ನು ಬಳಸಿದ ಖಾದ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಆಯುಕ್ತರು ತನಿಖೆ ನಡೆಸಿ ಕ್ರಮಕೈಗೊಳ್ಳಲಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿದೆ. ಇದೀಗ ಸುಮಾರು 264 ಕಡೆಗಳಲ್ಲಿ ಕೇಕ್‌ಗಳ ಸ್ಯಾಂಪಲ್ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.‌ ಇದರ ವರದಿಗೆ ಇಲಾಖೆ ಕಾಯುತ್ತಿದೆ.‌ ಒಂದು ವೇಳೆ, ವರದಿ ಪಾಸಿಟಿವ್ ಬಂದಿದ್ದೇ ಆದಲ್ಲಿ ಕೆಲವೊಂದು ಪದಾರ್ಥಗಳ ಮೇಲೆ ನಿರ್ಬಂಧ ಹೇರಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೇಕ್‌ ತನ್ನ ಮೂಲ ಸ್ವಾದವನ್ನು ಕಳೆದುಕೊಳ್ಳಲಿದೆ. ರಾಜ್ಯಾದ್ಯಂತ ಬೇಕರಿ ತಿನಿಸು, ಕೇಕ್ ಗಳಲ್ಲಿ ಕೃತಕ ಬಣ್ಣಗಳನ್ನು ಬಳಸುತ್ತಿರುವ ಕುರಿತು ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗೆ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular