Thursday, March 12, 2026
Flats for sale
Homeರಾಜಕೀಯಬೆಂಗಳೂರು : ಕರ್ನಾಟಕ ಸರ್ಕಾರಿ ಅಧಿಕಾರಿಗಳ ಜೊತೆ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸಭೆ,ವಸೂಲಿವಾಲಾ ಕೇವಲ ರಾಜ್ಯ...

ಬೆಂಗಳೂರು : ಕರ್ನಾಟಕ ಸರ್ಕಾರಿ ಅಧಿಕಾರಿಗಳ ಜೊತೆ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸಭೆ,ವಸೂಲಿವಾಲಾ ಕೇವಲ ರಾಜ್ಯ ಉಸ್ತುವಾರಿಯೋ ? ಕರ್ನಾಟಕದ ಮುಖ್ಯಮಂತ್ರಿಯೋ ? ಎಂದು ಜೆಡಿಎಸ್ ತೀವ್ರ ವಾಗ್ದಾಳಿ..!

ಬೆಂಗಳೂರು : ಕೇವಲ ರಾಜ್ಯ ಉಸ್ತುವಾರಿಯೋ ? ಕರ್ನಾಟಕದ ಮುಖ್ಯಮಂತ್ರಿಯೋ ? @INCindia,@INCKarnataka ಎಂದು X ನಲ್ಲಿ ಜೆಡಿಎಸ್ ಆಕ್ರೋಶ ಹೊರಹಾಕಿದ್ದು ಇದೀಗ ಜೊಎಯಲ್ಲಿ ಕಾಂಗ್ರೆಸ್ ಸಚಿವ ಕೆಎನ್ ರಾಜಣ್ಣ ಕೂಡ ಆಕ್ರೋಶ ಹೊರಹಾಕಿದ್ದಾರೆ.

ಇತ್ತೀಚಿಗಷ್ಟೇ ಬೆಂಗಳೂರಿಗೆ ಬಂದು ಕಾಂಗ್ರೆಸ್ ಶಾಸಕರ ಮತ್ತು ಸಚಿವರ ಜೊತೆ ಒನ್ ಟು ಒನ್ ಸಭೆ ನಡೆಸಿದ್ದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ , ಕೆಲವು ಮಂದಿ ಸರ್ಕಾರಿ ಅಧಿಕಾರಿಗಳಿಗೂ ಕೂಡ ಬುಲಾವ್ ನೀಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಸುರ್ಜೇವಾಲ ಸರ್ಕಾರಿ ಅಧಿಕಾರಿಗಳನ್ನು ಕರೆಸಿ ಮಾತುಕತೆ ನಡೆಸಿದ್ದೇ ಆದರೆ ಅದು ಸಂವಿಧಾನ ಬಾಹಿರ ಕೃತ್ಯ ಎಂದು ರಾಜಣ್ಣ ಹೇಳಿದ್ದಾರೆ. ಜೆಡಿಎಸ್ ಕೂಡ ಇದೇ ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸುರ್ಜೇವಾಲರದ್ದು ಸಂವಿಧಾನ ವಿರೋಧಿ ಕೃತ್ಯ ಎಂದು ಟೀಕಿಸಿದೆ.

ಸುರ್ಜೇವಾಲಾ ಅಧಿಕಾರಿಗಳಿಗೆ ಕರೆ ಮಾಡಿದ್ದ ಬಗ್ಗೆ ಕೆಲ ಸಚಿವರಿಗೆ ಮಾಹಿತಿ ದೊರೆತಿದೆ. ಮಾಹಿತಿ ಸಿಕ್ಕ ತಕ್ಷಣ ಕೆಲ ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುರ್ಜೇವಾಲಾಗೆ ಸಚಿವರ, ಶಾಸಕರ ಸಭೆ ಮಾಡುವ ಅವಕಾಶ ಇದೆ. ಆದರೆ, ಸರ್ಕಾರದ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸೂಚನೆ ನೀಡುವುದು ಸರಿಯಲ್ಲ. ನಿಯಮಗಳ ಪ್ರಕಾರ ಕೂಡ ಸುರ್ಜೇವಾಲಾ ಅಧಿಕಾರಿಗಳ ಸಭೆ ನಡೆಸುವುದು ತಪ್ಪು. ನಿಯಮಬದ್ಧವಾಗಿ ಸುರ್ಜೇವಾಲಾಗೆ ಅಧಿಕಾರಿಗಳ ಸಭೆ ನಡೆಸಲು ಅವಕಾಶವೇ ಇಲ್ಲ. ಕಾನೂನು ಕೂಡ ಹೀಗೆ ಸಭೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಕೆಲ ಸಚಿವರು ಖಡಕ್ ಆಗಿಯೇ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.

ಇಷ್ಟು ದಿನ ಕಾಂಗ್ರೆಸ್ ಶಾಸಕರು ಹಾಗೂ ಸಚಿವರೊಂದಿಗೆ ಸಭೆ ನಡೆಸುತ್ತಿದ್ದ ರಣದೀಪ್ ಸುರ್ಜೇವಾಲಾ, ಈಗ ಸೂಪರ್ ಸಿಎಂ ರೀತಿ ಸರ್ಕಾರದ ಕಾರ್ಯದರ್ಶಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸುರ್ಜೇವಾಲಾಗೆ ಆ ಅಧಿಕಾರ ಕೊಟ್ಟವರು ಯಾರು ? ಸರ್ಕಾರಿ ಅಧಿಕಾರಿಗಳ ಜೊತೆ ಸಭೆ ನಡೆಸುವುದು ಸಂವಿಧಾನ ವಿರೋಧಿ ಕೃತ್ಯ ಜೆಡಿಎಸ್ ಕಿಡಿಕಾರಿದೆ.

ರಾಜ್ಯ ಆಡಳಿತರೂಢ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ, ಡಿಕೆಶಿ ಬಣಗಳ ನಡುವೆ ಅಧಿಕಾರಕ್ಕಾಗಿ ಅಂತರ್ಯುದ್ಧ ನಡೆಯುತ್ತಿದೆ.‘ವಸೂಲಿವಾಲಾ ಸುರ್ಜೇವಾಲ ಕೇವಲ ರಾಜ್ಯ ಉಸ್ತುವಾರಿಯೋ ? ಕರ್ನಾಟಕದ ಮುಖ್ಯಮಂತ್ರಿಯೋ? ಕಾಂಗ್ರೆಸ್ ಸ್ಪಷ್ಟಪಡಿಸಬೇಕು. ಇಷ್ಟು ದಿನ ಕಾಂಗ್ರೆಸ್ ಶಾಸಕರು ಹಾಗೂ ಸಚಿವರೊಂದಿಗೆ ಸಭೆ ನಡೆಸುತ್ತಿದ್ದ ರಣದೀಪ್ ಸುರ್ಜೇವಾಲಾ, ಈಗ ಸೂಪರ್ ಸಿಎಂ ರೀತಿ ಸರ್ಕಾರದ ಕಾರ್ಯದರ್ಶಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಹೀಗಾಗಿ ಹೈಕಮಾಂಡ್ ಸದ್ದಿಲ್ಲದೆ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾರನ್ನೇ ಕರ್ನಾಟಕದ ಮುಖ್ಯಮಂತ್ರಿಯನ್ನಾಗಿ ಮಾಡಿರುವ ಶಂಕೆಯೂ ವ್ಯಕ್ತವಾಗುತ್ತಿದೆ. ಹೈಕಮಾಂಡ್ ಗುಲಾಮಗಿರಿಯಲ್ಲಿ ತೊಡಗಿರುವ ಡಮ್ಮಿ ಸಿಎಂ‌ @siddaramaiahಹಾಗೂ ಡಮ್ಮಿ ಡಿಸಿಎಂ @DKShivakumar
ಕರ್ನಾಟಕದ ಸ್ವಾಭಿಮಾನವನ್ನು ಅಡವಿಟ್ಟಿದ್ದಾರೆ. ಜೊತೆಗೆ ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟಿರುವ ಜನಾದೇಶಕ್ಕೆ ಅಪಮಾನ, ವಿದ್ರೋಹ ಎಸಗುತ್ತಿದ್ದಾರೆ ಎಂದು ಕ್ಷ ಖಾತೆಯಲ್ಲಿ ಆಕ್ರೋಶ ಹೊರಹಾಕಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular