ಬೆಂಗಳೂರು : ಕಳ್ಳ ಕುಳ್ಳ ಖ್ಯಾತಿಯ ಸ್ಯಾಂಡಲ್‌ವುಡ್ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 81 ವರ್ಷ ವಯಸ್ಸಾಗಿತ್ತು.ಸದ್ಯ ದ್ವಾರಕೀಶ್ ಅವರು ಇನ್ನಿಲ್ಲ ಎನ್ನುವ ಸುದ್ದಿ ತಿಳಿದು ಕನ್ನಡ ಚಿತ್ರರಂಗದ ನಟ, ನಟಿಯರು, ಪೋಷಕರ ಕಲಾವಿದರು ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.ಕರ್ನಾಟಕದ ಕುಳ್ಳ ಎಂದೇ ಖ್ಯಾತಿ ಪಡೆದಿದ್ದ ದ್ವಾರಕೀಶ್ ಅವರು ತಮ್ಮ ನಟನೆ ಮೂಲಕ ಕನ್ನಡದ ಜನರನ್ನು ರಂಜಿಸಿದ್ದರು. ನಟರಾಗಿ, ನಿರ್ಮಾಪಕರಾಗಿ, ಡೈರೆಕ್ಟರ್ ಕೂಡ ಆಗಿದ್ದ ಅವರು ಸಿನಿಮಾದಲ್ಲಿ ಅಕಲವನ್ನೂ ತಿಳಿದಿದ್ದರು. 90ರ ದಶಕದಲ್ಲಿ ವಿಷ್ಣುವರ್ಧನ್-ದ್ವಾರಕೀಶ್ ಎಂದರೆ ಕಳ್ಳ-ಕುಳ್ಳ ಎಂತಲೇ ಖ್ಯಾತಿ ಪಡೆದಿದ್ದರು.
‘ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ’ ಎಂದು ಪುತ್ರ ತಿಳಿಸಿದ್ದಾರೆ.ದ್ವಾರಕೀಶ್ 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನನ. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಿಕ್ಷಣ: ಶಾರದ ವಿಲಾಸ್ & ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮಾಡಿದ್ದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದರು. 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದರು. 1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ, ಮೇಯರ್ ಮುತ್ತಣ ಸಿನಿಮಾವನ್ನು ಸ್ವತಂತ್ರವಾಗಿ ನಿರ್ಮಿಸಿದ್ದರು. 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ, 53 ಸಿನಿಮಾಗಳನ್ನು ನಿರ್ಮಿಸಿದ ಖ್ಯಾತಿ ದ್ವಾರಕೀಶ್‌ಗೆ ಸಲ್ಲುತ್ತದೆ.
ದ್ವಾರಕೀಶ್ ಅವರ ನಿಧನವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.