ಬೆಂಗಳೂರು : ರಾಜ್ಯದಲ್ಲಿ ಬಡವರ ಮನೆ ಹಂಚಿಕೆಯಿAದ ಹಿಡಿದು ಕಂದಾಯ ಇಲಾಖೆ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಆಡಳಿತ ಪಕ್ಷದ ಸಚಿವರು, ಶಾಸಕರೇ ಬಹಿರಂಗವಾಗಿ ಹೇಳಿದ್ದು, ಸರಕಾರ ಆಡಳಿತದ ಮೇಲೆ ತನ್ನ ನಿಯಂತ್ರಣ ಕಳೆದುಕೊAಡಿದೆ. ಆದ್ದರಿಂದ ರಾಜ್ಯಪಾಲರು ಈ ಕೂಡಲೇ ಮಧ್ಯ ಪ್ರವೇಶಿಸಿ ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಭ್ರಷ್ಟತೆ-ಲೂಟಿಕೋರತನ’ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗವಾಗಿದೆ, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ಸ್ವತಃ ಕಾಂಗ್ರೆಸ್ ಶಾಸಕ ರಾಜು ಕಾಗೆ ವಾಸ್ತವ ಸ್ಥಿತಿಯನ್ನು ವಿವರಿಸಿ ಆಕ್ರೋಶ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿಬಂದಿರುವ ದುಸ್ಥಿತಿಯನ್ನು ವಿವರಿಸಿದ್ದಾರೆ.
ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರು ಬಡವರ ಮನೆ ಮಂಜೂರಾತಿಗೂ ಲಂಚ ನೀಡಬೇಕಾದ ಪರಿಸ್ಥಿತಿಯನ್ನು ವಿವರಿಸಿ ಸರ್ಕಾರದ ಮುಖಕ್ಕೆ ಮಂಗಳಾರತಿ ಎತ್ತಿದ್ದಾರೆ. ಸರ್ಕಾರದ ಕಚೇರಿಗಳಲ್ಲಿ ದರ ಹಾಗೂ ಪರ್ಸೆಂಟೇಜ್ ನಿಗದಿಪಡಿಸಿ ವಸೂಲಿ ಮಾಡಲಾಗುತ್ತಿರುವ ಪರಿಸ್ಥಿತಿಯನ್ನು ಸ್ವತಃ ಕಂದಾಯ ಸಚಿವರೇ ಅನಾವರಣಗೊಳಿಸಿದ್ದಾರೆ ಎಂದಿದ್ದಾರೆ.
ಕಾAಗ್ರೆಸ್ ಆಡಳಿತ ರಾಜ್ಯಕ್ಕೆ ಶಾಪಗ್ರಸ್ತವಾಗಿ ಕಾಡುತ್ತಿದೆ, ಬಿಜೆಪಿ ಹೋರಾಟ, ಜನಾಕ್ರೋಶ ಯಾತ್ರೆಯ ಕುರಿತು ಹಗುರವಾಗಿ ಮಾತನಾಡುತ್ತಿದ್ದ ಸಿಎಂ ಹಾಗೂ ಡಿಸಿಎಂ ಅವರಿಗೆ ಕಾಂಗ್ರೆಸ್ ಶಾಸಕರೇ ಇದೀಗ ಉತ್ತರ ಕೊಡುತ್ತಿದ್ದಾರೆ. ಒಂದು ಕಡೆ ಸಿಎಂ ಸ್ಥಾನಕ್ಕಾಗಿ ಶೀತಲ ಸಮರ ನಡೆಯುತ್ತಿದ್ದರೆ, ಮತ್ತೊಂದು ಕಡೆ ಅಭಿವೃದ್ಧಿ ಶೂನ್ಯತೆಯಿಂದ ಭ್ರಷ್ಟತೆಯ ಕೂಪದಲ್ಲಿ ಮುಳುಗಿರುವ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರೇ ಸಿಡಿದೆದ್ದು ನಿಂತಿದ್ದಾರೆ, ಇದರ ನಡುವೆ ಜನಸಾಮಾನ್ಯರ ಸ್ಥಿತಿ ಅಸಹನೀಯವಾಗಿದೆ, ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ ಎನ್ನುವ ಚಿತ್ರಣ ಸ್ಪಷ್ಟವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.